ರಾಜ್ಯ

ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷಾ ವೇಳಾಪಟ್ಟಿ ಪ್ರಕಟ

0

ಬೆಂಗಳೂರು : ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜನವರಿ 16 ರಿಂದ ಪೂರ್ವ ಸಿದ್ಧತಾ ಪರೀಕ್ಷೆ ಆರಂಭಗೊಳ್ಳಲಿದೆ.

ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು, ಪ್ರತಿ ವರ್ಷವೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಪೂರ್ವಭಾವಿಯಾಗಿ ಜಿಲ್ಲಾ ಹಂತದಲ್ಲಿ ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸಲಾಗುತ್ತಿದೆ. 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಅನ್ನು ದಿನಾಂಕ 02-03-2024 ರಿಂದ 22-03-2024ರವರೆಗೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದೆ.

ಇದಕ್ಕೂ ಮುಂಚಿತವಾಗಿ ಆಯಾ ಜಿಲ್ಲೆಗಳ ಉಪನಿರ್ದೇಶಕರು ಜಿಲ್ಲಾ ಮಟ್ಟದಲ್ಲಿ ವೇಳಾಪಟ್ಟಿ ಹಾಗೂ ಮಂಡಳಿಯ ನಿರ್ದೇಶನದಂತೆ ಪ್ರಾಯೋಗಿಕ ಪರೀಕ್ಷೆ ಹೊಂದಿರುವ ವಿಷಯಗಳಲ್ಲಿ 70 ಅಂಕಗಳು ಹಾಗೂ ಪ್ರಾಯೋಗಿಕ ಪರೀಕ್ಷೆ ಹೊಂದಿರದ ವಿಷಯಗಳಲ್ಲಿ 80 ಅಂಕಗಳಿಗೆ ಪ್ರಶ್ನೆಪತ್ರಿಕೆಗಳನ್ನು ಮಂಡಳಿಯ ಜಾಲತಾಣದಲ್ಲಿ ಅಪ್ ಲೋಡ್ ಮಾಡಿರುವಂತ ಮಾದರಿ ಪ್ರಶ್ನೆ ಪತ್ರಿಕೆ ಹಾಗೂ ನೀಲನಕ್ಷೆಗಳ ಆಧಾರದ ಮೇಲೆ ವಿಭಾಗ ಮಟ್ಟದಲ್ಲಿ ಪ್ರಶ್ನೆ ಪತ್ರಿಕಾ ತಯಾರಿಕಾ ತರಬೇತಿ ಹೊಂದಿದ ಉಪನ್ಯಾಸಕರನ್ನು ಬಳಸಿಕೊಂಡು ಸಿದ್ದಪಡಿಸುವಂತೆ ಸೂಚಿಸಲಾಗಿದೆ.

Advertisement. Scroll to continue reading.

ಜಿಲ್ಲಾ ಮಟ್ಟದ ಉಪನಿರ್ದೇಶಕರು ತಮ್ಮ ವ್ಯಾಪ್ತಿಯಲ್ಲಿ ಬರುವ ಪಿಯು ಕಾಲೇಜುಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಪ್ರಶ್ನೆಪತ್ರಿಕೆಗಳನ್ನು ವಿತರಿಸಿ, ದಿನಾಂಕ 16-01-2024 ರಿಂದ ದಿನಾಂಕ 30-01-2024ರವರೆಗೆ ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸುವುದು. ಯಾವುದೇ ಲೋಪ ಆಗದಂತೆ ಎಚ್ಚರಿಕೆ ವಹಿಸಿ, ಗೌಪ್ಯತೆಯಿಂದ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com