ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ದಂಡ ವಿಧಿಸಿದ್ದು, ತಪ್ಪಿದಲ್ಲಿ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ದೂರುದಾರರಿಗೆ ನೀಡಬೇಕಿರುವ ಹಣದ ಜೊತೆಗೆ ದಂಡ ಪಾವತಿಸದೇ ಇದ್ದಲ್ಲಿ 6 ತಿಂಗಳ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶದಲ್ಲಿ ಕೋರ್ಟ್ ಹೇಳಿದೆ.
2011 ರಲ್ಲಿ ಮಧು ಬಂಗಾರಪ್ಪ ಅವರು ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಅವರ ವಿರುದ್ಧ ರಾಜೇಶ್ ಎಕ್ಸ್ ಪೋರ್ಟ್ ಸಂಸ್ಥೆ ದೂರು ದಾಖಲಿಸಿತ್ತು.
Advertisement. Scroll to continue reading.
6 ಕೋಟಿ 96 ಲಕ್ಷದ 6 0 ಸಾವಿರ ರೂ. ದಂಡವನ್ನು ದೂರುದಾರ ಕಂಪೆನಿಗೆ ಮತ್ತು 10 ಸಾವಿರ ರೂ. ದಂಡವನ್ನು ಸರಕಾರಕ್ಕೆ ತೆರಬೇಕು ಎಂದು ತೀರ್ಪಿನಲ್ಲಿ ಹೇಳಲಾಗಿದೆ.
ಮಧು ಬಂಗಾರಪ್ಪ ದೂರುದಾರರಿಗೆ ಕೇವಲ 50 ಲಕ್ಷ ರೂ. ನೀಡಿ ಉಳಿದ ಹಣ ಪಾವತಿಸಿರಲಿಲ್ಲ. ಜನವರಿ 30ರೊಳಗೆ 6.10 ಲಕ್ಷ ಪಾವತಿಸುವುದಾಗಿ ಮಧು ಬಂಗಾರಪ್ಪ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ.
ಆದರೆ ವಿಶೇಷ ಕೋರ್ಟ್, ಮುಚ್ಚಳಿಕೆ ಒಪ್ಪಲು ನಿರಾಕರಿಸಿದ್ದು, ಈ ಹಿಂದೆಯೂ ಮಧು ಬಂಗಾರಪ್ಪ ನೀಡಿದ್ದ ಮುಚ್ಚಳಿಕೆ ಪಾಲಿಸಿಲ್ಲ. ಆದ್ದರಿಂದ ಮನವಿಯನ್ನು ತಿರಸ್ಕರಿಸುತ್ತಿರುವುದಾಗಿ ಹೇಳಿದೆ.
Advertisement. Scroll to continue reading.