ಹುಣಸೂರು: ಕೆಎಸ್ಆರ್ ಟಿಸಿ ಎಲೆಕ್ಟ್ರಿಕ್ ಪವರ್ ಪ್ಲಸ್ ಬಸ್ ಹಾಗೂ ಜೀಪ್ ಮಧ್ಯೆ ಮುಖಾಮುಖಿ ಡಿಕ್ಕಿ ಉಂಟಾಗಿ ನಾಲ್ವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿಯ ಹೆದ್ದಾರಿಯಲ್ಲಿ ನಡೆದಿದೆ.
ಪಿರಿಯಾಪಟ್ಟಣಕ್ಕೆ ಶುಂಠಿ ಕೊಲೆಸಕ್ಕೆ ಕೂಲಿಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ ವಾಹನವನ್ನು ಹಿಂದಿಕ್ಕುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ ಪರಿಣಾಮ ಜೀಪಿನಲ್ಲಿದ್ದವರು ಹೊರಗೆಸೆಯಲ್ಪಟ್ಟು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರು ಎಚ್.ಡಿ.ಕೋಟೆ ತಾಲೂಕಿನ ಜಿಯಾರ ಗ್ರಾಮದ ಸುತ್ತಮುತ್ತಲಿನ ಹಳ್ಳಿಯ ಕೂಲಿ ಕಾರ್ಮಿಕರು ಎನ್ನಲಾಗಿದ್ದು. ಗಂಭೀರ ಗಾಯಗೊಂಡಿದ್ದ ಐದು ಮಂದಿಯನ್ನು ಹುಣಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಬಸ್ ಚಾಲಕನ ಸ್ಥಿತಿಯೂ ಗಂಭೀರವಾಗಿದೆ ಎಂದು ಹೇಳಲಾಗಿದೆ.
Advertisement. Scroll to continue reading.
ಅಪಘಾತದಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರ ಅಸ್ತವ್ಯಸ್ಥಗೊಂಡಿತ್ತು.
ಅಪಘಾತ ಸ್ಥಳಕ್ಕೆ ಹುಣಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ.
Advertisement. Scroll to continue reading.