ಬೆಂಗಳೂರು : ಯುವಕನೊಬ್ಬ ನಮ್ಮ ಮೆಟ್ರೋ ರೈಲಿನ ಮುಂದೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹಸಿರು ಮಾರ್ಗದ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ೦೭-೧೨ ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದೆ. ಬಿಎಂಆರ್ ಸಿಎಲ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಸಂಭಾವ್ಯ ದೊಡ್ಡ ಅನಾಹುತವೊಂದು ತಪ್ಪಿದೆ.
ನಿಲ್ದಾಣದ ಪ್ಲಾಟ್ ಫಾರ್ಮ್ನ ಕೊನೆಯಲ್ಲಿ ನಿಂತಿದ್ದ ೨೨ ವರ್ಷದ ಯುವಕ ಬರುತ್ತಿದ್ದ ರೈಲಿನ ಮುಂದೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ಎಚ್ಚೆತುಕೊಂಡ ಬಿಎಂಆರ್ ಸಿಎಲ್ ಸಿಬ್ಬಂದಿ ಆತನ್ನು ರಕ್ಷಿಸಿ, ಸಮೀಪದ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ವೇಳೆ ನಾಲ್ಕು ರೈಲುಗಳ ಸಂಚಾರವನ್ನು ಅವುಗಳು ಇದ್ದ ನಿಲ್ದಾಣದಲ್ಲಿಯೇ ಸ್ಥಗಿತಗೊಳಿಸಲಾಯಿತು. ಅದರಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಲಾಯಿತು. ಈ ಅವಧಿಯಲ್ಲಿ ಯಶವಂತಪುರ ಮತ್ತು ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಹಸಿರು ಮಾರ್ಗದ ರೈಲುಗಳು ಸಂಚರಿಸಿವೆ.
Advertisement. Scroll to continue reading.
ರಾತ್ರಿ ೮ .೦೦ ಗಂಟೆಯಿAದ ಹಸಿರು ಮಾರ್ಗದಲ್ಲಿ ಸಂಪೂರ್ಣವಾಗಿ ಕಾರ್ಯಾಚರಣೆ ಪುನರಾರಂಭಿಸಲಾಗಿದೆ ಎಂದು ಬಿಎಂಆರ್ ಸಿಎಲ್ ಪ್ರಕಟಣೆ ತಿಳಿಸಿದೆ.