ಗದಗ: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಬ್ಯಾನರ್ ಕಟ್ಟುವಾಗ ವಿದ್ಯುತ್ ತಗುಲಿ ಮೂವರು ಮೃತಪಟ್ಟಿದ್ದ ಹಿನ್ನೆಲೆ ಸೂರಣಗಿ ಗ್ರಾಮಕ್ಕೆ ಭೇಟಿ ನೀಡಿದ ನಟ ಯಶ್ ಮೃತರ ಮನೆಗೆ ತೆರಳಿ ಸಾಂತ್ವನ ಹೇಳಿದರು.
ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಯಶ್, ನನ್ನ ಹುಟ್ಟುಹಬ್ಬದ ದಿನ ಕಟೌಟ್ ಕಟ್ಟುವಾಗ ಮೂವರು ಅಭಿಮಾನಿಗಳು ನಿಧನರಾದ ಘಟನೆ ತೀವ್ರ ನೋವುಂಟು ಮಾಡಿದೆ. ಬ್ಯಾನರ್ ಹಾಕೋದು ಕಟೌಟ್ ಕಟ್ಟೋದು ಬೇಡ. ಇನ್ಮುಂದೆ ಈ ರೀತಿ ಮಾಡಬೇಡಿ ಎಂದು ಅಭಿಮಾನಿಗಳಿಗೆ ಯಶ್ ಹೇಳಿದ್ದಾರೆ.
Advertisement. Scroll to continue reading.
ನನ್ನ ಹುಟ್ಟುಹಬ್ಬ ಯಾಕೆ ಬರುತ್ತೋ ಅಂತ ಭಯವಾಗುತ್ತಿದೆ. ಯಾರೂ ಈ ರೀತಿ ಮಾಡಬೇಡಿ. ಬರ್ತ್ ಡೇ ಮಾಡಬೇಡಿ ಎಂದು ಹೇಳಿದರೆ, ಬೇಸರ ಮಾಡಿಕೊಳ್ಳುತ್ತಾರೆ. ನೀವು ಬ್ಯಾನರ್, ಕಟೌಟ್ ಹಾಕುವುದನ್ನು ನಾನು ಇಷ್ಟಪಡುವುದಿಲ್ಲ. ನನ್ನ ಮೇಲೆ ಪ್ರೀತಿ ಇದ್ದರೆ ಜವಾಬ್ದಾರಿಯಿಂದ ನಡೆದುಕೊಳ್ಳಿ ಎಂದು ಹೇಳಿದ್ದು, ಮನೆ ಮಕ್ಕಳನ್ನು ಕಳೆದುಕೊಂಡಿರುವ ಕುಟುಂಬಸ್ಥರಿಗೆ ಏನು ನೆರವು ಬೇಕೋ ಅದನ್ನು ಮಾಡುತ್ತೇನೆ. ಏನೇ ಪರಿಹಾರ ಕೊಟ್ಟರು ಮಗ ವಾಪಸ್ ಬರ್ತಾನಾ ಎಂದು ಹೇಳಿದರು.
ಭಾನುವಾರ ರಾತ್ರಿ ಕಟೌಟ್ ಕಟ್ಟುವಾಗ ವಿದ್ಯುತ್ ಸ್ಪರ್ಶಿಸಿ ಅಭಿಮಾನಿಗಳಾದ ಹನುಮಂತ ಹರಿಜನ (21), ಮುರಳಿ ನಡವಿನಮನಿ (20) ಮತ್ತು ನವೀನ್ (19) ಮೃತಪಟ್ಟಿದ್ದರು.
Advertisement. Scroll to continue reading.