ಮುಂಬೈ : ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವೇ ನಿಜವಾದ ಶಿವಸೇನೆ ಎಂದು ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನರ್ವೇಕರ್ ತೀರ್ಪು ನೀಡಿದ್ದರು. ಇದೀ ಇದರ ವಿರುದ್ಧ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೇರಿದಂತೆ 16 ಶಿವಸೇನೆ ಶಾಸಕರ ಅನರ್ಹತೆಯ ವಿರುದ್ಧದ ಅರ್ಜಿಗಳನ್ನು ಜನವರಿ 10ರಂದು ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ವಜಾಗೊಳಿಸಿದ್ದರು.
ಪಕ್ಷದ 2018 ರ ಸಂವಿಧಾನವನ್ನು ಚುನಾವಣಾ ಆಯೋಗ ದಾಖಲೆಯಲ್ಲಿಲ್ಲದ ಕಾರಣ ಅದನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.
Advertisement. Scroll to continue reading.
ಚುನಾವಣಾ ಆಯೋಗವು ಒದಗಿಸಿದ ಶಿವಸೇನಾ ಸಂವಿಧಾನವು ನಿಜವಾದ ಸಂವಿಧಾನವಾಗಿದೆ, ಇದನ್ನು ಎಸ್ಎಸ್ ಸಂವಿಧಾನ ಎಂದು ಕರೆಯಲಾಗುತ್ತದೆ ಎಂದು ಸ್ಪೀಕರ್ ಹೇಳಿದ್ದು, ಏಕನಾಥ್ ಶಿಂಧೆ ಬಣವೇ ನಿಜವಾದ ಶಿವಸೇನಾ ಎಂದಿದ್ದಾರೆ.