ಸಿನಿಮಾ

ಈಗ ನನ್ನ ಕುಟುಂಬದ ಹಿತದೃಷ್ಟಿಯಿಂದ ಧ್ವನಿ ಎತ್ತುವ ಸಮಯ ಬಂದಿದೆ : ಕಾನೂನು ಕ್ರಮದ ಎಚ್ಚರಿಕೆ ನೀಡಿದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ

0

ನಟ ದರ್ಶನ್ ಕಾಟೇರ ಯಶಸ್ಸಿನ ಸಂಭ್ರಮದಲ್ಲಿದ್ದಾರೆ. ಇತ್ತ ಸಂಕಷ್ಟ ಎದುರಾಗಿದೆ. ಹೌದು, ಪವಿತ್ರ ಗೌಡ ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಇದು ದರ್ಶನ್ ಪತ್ನಿಯ ವಿಜಯಲಕ್ಷ್ಮಿಯನ್ನು ಗರಂ ಆಗುವಂತೆ ಮಾಡಿದೆ. ಅಲ್ಲದೇ ಅವರು ಪವಿತ್ರಾ ಗೌಡ ಅವರ ಫೋಟೋಗಳನ್ನು ಹಂಚಿಕೊಂಡು ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ವಿಜಯಲಕ್ಷ್ಮಿ ಅವರು ದರ್ಶನ್ ಹಾಗೂ ತಮ್ಮ ಪುತ್ರ ವಿನೀತ್ ಜೊತೆಗಿನ ಚಿತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ‘ಕುಟುಂಬವೇ ಎಲ್ಲ’ ಎಂದು ಕ್ಯಾಪ್ಷನ್ ನೀಡಿದ್ದರು.

ಅದಾದ ಕೆಲವೇ ಹೊತ್ತಿನಲ್ಲಿ ಪವಿತ್ರಾ ಗೌಡ ಸಹ, ತಮ್ಮ ಹಾಗೂ ದರ್ಶನ್ರ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ‘ನಮ್ಮ ಸಂಬಂಧಕ್ಕೆ 10 ವರ್ಷವಾಯಿತು. ಇನ್ನೂ ಹಲವು ವರ್ಷ ಜೊತೆಗೆ ಸಾಗಬೇಕು’ ಎಂದು ಕ್ಯಾಪ್ಷನ್ ನೀಡಿದ್ದಾರೆ.

ಬಳಿಕ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ವಿಜಯಲಕ್ಷ್ಮಿ ದರ್ಶನ್, ‘ಈ ಮಹಿಳೆಗೆ ಪ್ರಜ್ಞೆ ಇದ್ದಿದ್ದರೆ ಬೇರೊಬ್ಬರ ಗಂಡನ ಚಿತ್ರವನ್ನು ಪೋಸ್ಟ್ ಮಾಡುತ್ತಿರಲಿಲ್ಲ. ಈ ಕಾರ್ಯ ಆಕೆಯ ನೈತಿಕತೆ ಮತ್ತು ಆದರ್ಶ ಎಂಥಹದ್ದು ಎಂದು ತೋರಿಸುತ್ತದೆ. ವ್ಯಕ್ತಿಯೊಬ್ಬ ವಿವಾಹಿತನೆಂದು ತಿಳಿದಿದ್ದರೂ ಸಹ ಈಕೆ ತನ್ನ ವೈಯಕ್ತಿಕ ಅಗತ್ಯಗಳಿಗಾಗಿ ಮತ್ತು ಲಾಭಕ್ಕಾಗಿ ಹತ್ತಿರವಾಗುತ್ತಾಳೆ. ಖುಷಿ ಗೌಡ, ಪವಿತ್ರಾ ಮತ್ತು ಸಂಜಯ್ ಸಿಂಗ್ ಅವರ ಮಗಳು ಎಂಬುದನ್ನು ಸ್ಪಷ್ಟವಾಗಿ ಸಾಬೀತು ಮಾಡುತ್ತವೆ ಈ ಚಿತ್ರಗಳು. ನಾನು ಸಾಮಾನ್ಯವಾಗಿ ವೈಯಕ್ತಿಕ ವಿಷಯಗಳ ಬಗ್ಗೆ ಮಾತನಾಡಲು ಸಾಮಾಜಿಕ ಮಾಧ್ಯಮವನ್ನು ಬಳಸುವುದಿಲ್ಲ. ಆದರೆ ಈಗ ನನ್ನ ಕುಟುಂಬದ ಹಿತದೃಷ್ಟಿಯಿಂದ ಧ್ವನಿ ಎತ್ತುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ. ಇಡೀ ಸಮಾಜಕ್ಕೆ ತಪ್ಪು ಚಿತ್ರಣ ನೀಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ. ಪವಿತ್ರಾ ಗೌಡ ಹಾಗೂ ಅವರ ಪತಿ ಸಂಜಯ್ ಸಿಂಗ್ರ ಹಳೆಯ ಚಿತ್ರಗಳನ್ನು ವಿಜಯಲಕ್ಷ್ಮಿ ದರ್ಶನ್ ತಮ್ಮ ಸಂದೇಶದೊಂದಿಗೆ ಹಂಚಿಕೊಂಡಿದ್ದಾರೆ.

Advertisement. Scroll to continue reading.

ಈ ಹಿಂದೆ ಪವಿತ್ರ ಗೌಡ, ಪುತ್ರಿ ಖುಷಿ ಗೌಡ ಹುಟ್ಟುಹಬ್ಬದಂದು ದರ್ಶನ್ ಜೊತೆಗೆ ತಮ್ಮ ಪುತ್ರಿ ಹುಟ್ಟುಹಬ್ಬ ಆಚರಿಸಿದ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಆಗ ವಿಜಯಲಕ್ಷ್ಮಿ ದರ್ಶನ್ ಅವರು ಯಾವುದೇ ಪೋಸ್ಟ್ ಹಾಕಿರಲಿಲ್ಲ. 

ಇದಕ್ಕೂ ಮೊದಲು ದರ್ಶನ್ ಹುಟ್ಟುಹಬ್ಬದಂದು, ನಟಿ ಮೇಘಾ ಶೆಟ್ಟಿ, ದರ್ಶನ್ ಜೊತೆಗೆ ತಾವು ಹಾಗೂ ಪವಿತ್ರಾ ಗೌಡ ಇರುವ ಚಿತ್ರಗಳನ್ನು ಹಂಚಿಕೊಂಡಿದ್ದರು. ಆಗ ವಿಜಯಲಕ್ಷ್ಮಿ ದರ್ಶನ್ ಅವರು ಸಾಮಾಜಿಕ ಜಾಲತಾಣದ ಮೂಲಕ ಅಸಮಾಧಾನ ಹೊರಹಾಕಿದ್ದರು. ಕೂಡಲೇ ಮೇಘಾ ಶೆಟ್ಟಿ ಆ ಚಿತ್ರಗಳನ್ನು ಡಿಲೀಟ್ ಮಾಡಿದ್ದರು.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com