ನವದೆಹಲಿ: ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಘೋಷಣೆ ಮಾಡಲಾಗಿದೆ.
ಈ ವಿಷಯವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಕ್ಸ್ ಮೂಲಕ ಘೋಷಣೆ ಮಾಡಿದ್ದಾರೆ.
ಎಲ್ ಕೆ ಅಡ್ವಾಣಿಯವರಿಗೆ ಭಾರತ ರತ್ನ ಪ್ರಶಸ್ತಿ ಗೌರವ ನೀಡಿರುವ ವಿಚಾರವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಹಳ ಸಂತಸವಾಗುತ್ತಿದೆ. ಈ ಕುರಿತು ನಾನು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ವಿಷಯ ಹಂಚಿಕೊಂಡಿದ್ದು ಅದನ್ನು ಕೇಳಿ ಅವರು ಬಹಳ ಖುಷಿಪಟ್ಟರು ಎಂದು ಹೇಳಿದ್ದಾರೆ.
Advertisement. Scroll to continue reading.