ಭೋಪಾಲ್: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಹನ್ನೊಂದು ಜನರು ಸಾವನ್ನಪ್ಪಿರುವ ಘಟನೆ ಮಧ್ಯ ಪ್ರದೇಶದ ಹರ್ದಾ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಘಟನೆಯಲ್ಲಿ 59ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಹರ್ದಾ ಕಲೆಕ್ಟರ್ ರಿಷಿ ಗಾರ್ಗ್ ಸಾವಿನ ಸಂಖ್ಯೆಯನ್ನು ದೃಢಪಡಿಸಿದ್ದಾರೆ.
ಗಾಯಾಳುಗಳು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡ ರೋಗಿಗಳನ್ನು ಭೋಪಾಲ್ ಮತ್ತು ಇಂದೋರ್‌ಗೆ ಸ್ಥಳಾಂತರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
Advertisement. Scroll to continue reading.
ಹರ್ದಾ ನಗರದಿಂದ 2 ಕಿ.ಮೀ ದೂರದಲ್ಲಿರುವ ಮಗರ್ಧ ರೋಡ್ ಕಾರ್ಖಾನೆಯಲ್ಲಿ ಬೆಳಗ್ಗೆ ಸುಮಾರು 11 ಗಂಟೆಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಲು ಕಾರಣ ಏನು ಎಂಬುದು ಇದುವರೆಗೆ ತಿಳಿದು ಬಂದಿಲ್ಲ.
ಇನ್ನೂ ಹಲವು ಮಂದಿ ಕಾರ್ಖಾನೆ ಒಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ಸ್ಪೋಟದ ಪರಿಣಾಮ ಕಾರ್ಖಾನೆ ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದ್ದು ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
Advertisement. Scroll to continue reading.