ನವದೆಹಲಿ: ಫೆ.9 ರಂದು ಮುಕ್ತಾಯಗೊಳ್ಳಬೇಕಿದ್ದ ಬಜೆಟ್ ಅಧಿವೇಶನವನ್ನು ಕೇಂದ್ರ ಸರ್ಕಾರ ಒಂದು ದಿನಕ್ಕೆ ವಿಸ್ತರಣೆ ಮಾಡಿದೆ. ಈಗಾಗಲೇ ಕೇಂದ್ರ ಹಣಕಾಸು ಸಚಿವೆ ಯುಪಿಎ ಸರ್ಕಾರದಲ್ಲಿ ಆಗಿರುವ ಆರ್ಥಿಕ ದುರಪಯೋಗದ ಶ್ವೇತಪತ್ರ ಮಂಡಿಸಿದ್ದಾರೆ. ಕೊನೆಯ ಬಜೆಟ್ ಅಧಿವೇಶನವಾದ ನಾಳೆ(ಶನಿವಾರ) ಬಿಜೆಪಿ ತನ್ನ ಎಲ್ಲಾ ಸಂಸದರಿಗೆ ಉಭಯ ಸದನದಲ್ಲಿ ಕಡ್ಡಾಯ ಹಾಜರಿರುವಂತೆ ವಿಪ್ ಜಾರಿಗೊಳಿಸಿದೆ.
ಕೆಲ ಪ್ರಮುಖ ಶಾಸಕಾಂಗ ವ್ಯವಹಾರಗಳ ಕುರಿತು ಸದನದಲ್ಲಿ ಚರ್ಚೆ ನಡೆಸಲಾಗುತ್ತದೆ. ಹೀಗಾಗಿ ಎಲ್ಲರು ಕಡ್ಡಾಯವಾಗಿ ಹಾಜರಾತಿ ಇರಬೇಕು ಎಂದು ಬಿಜೆಪಿ ಮುಖ್ಯ ಸಚೇತಕ ಲಕ್ಷ್ಮೀಕಾಂತ್ ಬಾಜ್‌ಪೇಯ್ ವಿಪ್ ಹೊರಡಿಸಿದ್ದಾರೆ.
ಲೋಕಸಭಾ ಚುನಾವಣೆ ಅಖಾಡಕ್ಕಿಳಿಯುವ ಮೊದಲು ನಡೆಯುತ್ತಿರುವ ಕೊನೆಯ ಅಧಿವೇಶನ ಇದಾಗಿದೆ. ಹೀಗಾಗಿ ಪ್ರಧಾನಿ ಮೋದಿ ಸರ್ಕಾರ ಕೆಲ ಅಚ್ಚರಿ ನೀಡುವ ಸಾಧ್ಯತೆ ಎಂದು ಹೇಳಲಾಗುತ್ತಿದೆ.
Advertisement. Scroll to continue reading.
ಸದನದಲ್ಲಿ ಕೆಲ ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಲು ಉದ್ದೇಶಿಸಲಾಗಿದೆ. ಉಭಯ ಸದನದಲ್ಲಿ ಈ ಕುರಿತು ಚರ್ಚೆ ನಡೆಯಲಿದೆ. ಹೀಗಾಗಿ ಬಿಜೆಪಿಯ ಲೋಕಸಭಾ ಹಾಗೂ ರಾಜ್ಯಸಭೆಯ ಎಲ್ಲಾ ಸದಸ್ಯರು ಎರಡೂ ಸದನದಲ್ಲಿ ಹಾಜರರಿಬೇಕು. ಸಂಪೂರ್ಣ ದಿನ ಸದನದಲ್ಲಿ ಹಾಜರಿದ್ದು, ಸರ್ಕಾರದ ನಿರ್ಧಾರವನ್ನು ಬೆಂಬಲಿಸಲು ಈ ಮೂಲಕ ಕೋರಲಾಗಿದೆ ಎಂದು ಲಕ್ಷ್ಮೀಕಾಂತ್ ಬಾಜ್‌ಪೇಯ್ ವಿಪ್ ಹೊರಡಿಸಿದ್ದಾರೆ.
ಮೊನ್ನೆಯಷ್ಟೇ ಹಿಂದಿನ ಮನಮೋಹನ ಸಿಂಗ್ ಅವಧಿಯ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ 10 ವರ್ಷಗಳ ಅವಧಿಯಲ್ಲಿ ದೇಶವನ್ನು ಎಲ್ಲಾ ರಂಗದಲ್ಲೂ ಅಧಃಪತನದತ್ತ ಕೊಂಡೊಯ್ದಿದೆ ಎಂದು ಎನ್‌ಡಿಎ ಸರ್ಕಾರ ಶ್ವೇತಪತ್ರ ಬಿಡುಗಡೆ ಮಾಡಿತ್ತು. ಇದೀಗ ನಾಳಿನ ವಿಪ್ ಜಾರಿ ಬಗೆಗೆ ಕುತೂಹಲ ಹುಟ್ಟಿದೆ.
Advertisement. Scroll to continue reading.