ತಮಿಳುನಾಡು: ವಿರುದುನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಭೀಕರ ಸ್ಫೋಟ ಸಂಭವಿಸಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಸ್ಫೋಟದ ತೀವ್ರತೆಗೆ ಪಟಾಕಿ ಕಾರ್ಖಾನೆ ಬಳಿಯ ನಾಲ್ಕು ಕಟ್ಟಡಗಳು ಸ್ಫೋಟದಿಂದ ಹಾನಿಗೊಳಗಾಗಿವೆ ಎನ್ನಲಾಗಿದೆ.
ಪಟಾಕಿ ಕಾರ್ಖಾನೆಯು ವಿಜಯ್ ಎಂಬುವವರಿಗೆ ಸೇರಿದ್ದಾಗಿದೆ, ಇದು ನಗರದ ವೆಂಬಕೊಟ್ಟೈ ಪ್ರದೇಶದಲ್ಲಿದೆ. ಘಟನೆಯ ನಂತರ ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡವು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement. Scroll to continue reading.
ಮೃತರಲ್ಲಿ ಮಹಿಳೆಯರೂ ಸೇರಿದ್ದಾರೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವೆಂಬಕೊಟ್ಟೈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮತ್ತಿಬ್ಬರು ಕೊನೆಯುಸಿರೆಳೆದಿದ್ದಾರೆ.