ನವದೆಹಲಿ: ಆಮ್ ಆದ್ಮಿ ಪಕ್ಷದ(ಎಎಪಿ) ಅಭ್ಯರ್ಥಿ ಕುಲದೀಪ್ ಕುಮಾರ್ ಅವರು ಚಂಡೀಗಢದ ಚುನಾಯಿತ ಮೇಯರ್ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಘೋಷಿಸಿದೆ.
ಇದಕ್ಕೂ ಮುನ್ನ 8 ‘ಅಸಿಂಧು’ ಮತಗಳನ್ನು ಸೇರಿಸಿ ಮತಗಳ ಮರುಎಣಿಕೆ ಮಾಡುವಂತೆ ನಿರ್ದೇಶಿಸಿದ್ದ ಸುಪ್ರೀಂ ಕೋರ್ಟ್, ಈಗ ಮರು ಎಣಿಕೆಯ ನಂತರ ಫಲಿತಾಂಶ ಪ್ರಕಟಿಸಿದೆ.
ಈ ಹಿಂದೆ ಮತಪತ್ರಗಳನ್ನು ತಿರುಚಿ ಬಿಜೆಪಿ ಅಭ್ಯರ್ಥಿಯನ್ನು ಮೇಯರ್ ಎಂದು ಘೋಷಿಸಿದ್ದ ರಿಟರ್ನಿಂಗ್ ಅಧಿಕಾರಿ ಅನಿಲ್ ಮಸೀಹ್ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠ ಆದೇಶಿಸಿದೆ.
Advertisement. Scroll to continue reading.
ಚುನಾವಣಾ ಅಧಿಕಾರಿ ಉದ್ದೇಶಪೂರ್ವಕವಾಗಿ ಮತಪತ್ರಗಳನ್ನು ತಿರುಚಿದ್ದಾರೆ. ಅವರ ದುಷ್ಕೃತ್ಯಕ್ಕಾಗಿ ಕಾನೂನು ಕ್ರಮ ಜರುಗಿಸಲು ಸುಪ್ರೀಂ ಕೋರ್ಟ್ ಸೂಚಿಸಿದೆ.
ಸೋಮವಾರ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಹಾಜರಾದ ಚುನಾವಣಾ ಅಧಿಕಾರಿ ಅನಿಲ್ ಮೆಸಿಹ್ ಅವರು ಮತಪತ್ರಗಳನ್ನು ತಿರುಚಿದ್ದನ್ನು ಒಪ್ಪಿಕೊಂಡಿದ್ದರು. ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ನೇತೃತ್ಬದ ಪೀಠ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿತ್ತಲ್ಲದೆ ಈ ಘಟನೆ ವಿರುದ್ಧ ಕಳವಳ ವ್ಯಕ್ತಪಡಿಸಿತ್ತು.
Advertisement. Scroll to continue reading.