ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಈಗಾಗಲೇ ಜೆಡಿಎಸ್ ತಾಲೀಮು ಆರಂಭಿಸಿದೆ. ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ದಿಢೀರ್ ದೆಹಲಿ ಪ್ರವಾಸ ಮಾಡಿದ್ದಾರೆ. ಕೇಂದ್ರ ಸಚಿವ ಅಮಿಶ್ ಶಾ ಅವರೊಂದಿಗೆ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿ ಮಂಡ್ಯ ವಿಚಾರದಲ್ಲಿ ಮೇಲುಗೈ ಸಾಧಿಸಿದ್ದಾರೆ ಎನ್ನಲಾಗಿದೆ. ಮಂಡ್ಯ, ಹಾಸನ, ಕೋಲಾರ ಟಿಕೆಟ್ ಜೆಡಿಎಸ್‌ಗೆ ನೀಡಲು ಬಿಜೆಪಿ ಹೈಕಮಾಂಡ್ ಒಪ್ಪಿದೆ ಎನ್ನಲಾಗಿದೆ.
ದೆಹಲಿಯಲ್ಲಿ ಹೆಚ್ಡಿ ಕುಮಾರಸ್ವಾಮಿ ಮತ್ತು ಅಮಿತ್ ಶಾ ಮಾತು ಕತೆ ನಡೆಸಿದ್ದಾರೆ. ಈ ವೇಳೆ ಮಂಡ್ಯ, ಹಾಸನ, ಕೋಲಾರ ಟಿಕೆಟ್ ಜೆಡಿಎಸ್ಗೆ ಫಿಕ್ಸ್ ಎಂದು ಅಮಿತ್ ಶಾ ಮಾತುಕೊಟ್ಟಿದ್ದು ಮಂಡ್ಯ, ಹಾಸನದಲ್ಲಿ ನಿಮ್ಮ ಶಾಸಕರಿಂದಲೇ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ ಎಂದು ಕುಮಾರಸ್ವಾಮಿ ದೂರಿದ್ದಾರೆ.
ಕೇಂದ್ರ ಸಚಿವ ಅಮಿಶ್ ಶಾ ಅವರೊಂದಿಗೆ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿ ಮಂಡ್ಯ ವಿಚಾರದಲ್ಲಿ ಮೇಲುಗೈ ಸಾಧಿಸಿದ್ದಾರೆ. ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಯ ಬಗ್ಗೆ ಮತ್ತೊಮ್ಮೆ ಚರ್ಚೆ ಮಾಡೋಣಾ ಎಂದು ಹೈಕಮಾಂಡ್ ಹೆಚ್ಡಿಕೆಗೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
Advertisement. Scroll to continue reading.
ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗಿರುವ ಹಿನ್ನೆಲೆಯಲ್ಲಿ ಸುಮಲತಾ ಮತ್ತೆ ಪಕ್ಷೇತರವಾಗಿ ಸ್ಪರ್ಧೆ ಮಾಡ್ತಾರಾ ಎಂದು ಕಾದು ನೋಡಬೇಕಿದೆ. ಮಂಡ್ಯ ಬಿಜೆಪಿ- ಜೆಡಿಎಸ್ ಅಭ್ಯರ್ಥಿಯಾಗಿ ಡಾ.ಮಂಜುನಾಥ್ ಸ್ಪರ್ಧೆ ಖಚಿತವಾಗಿದೆ ಎನ್ನಲಾಗಿದೆ. ಬಿಜೆಪಿ ಹೈ ಕಮಾಂಡ್ ಡಾ.ಮಂಜುನಾಥ್ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ಕೊಟ್ಟ ಹಿನ್ನೆಲೆಯಲ್ಲಿ ಸುಮಲತಾಗೆ ಜೆಡಿಎಸ್ ಭಾರೀ ಠಕ್ಕರ್ ಕೊಟ್ಟಿದೆ.
ಹಾಸನ ಲೋಕಸಭೆ ಕ್ಷೇತ್ರದಿಂದ – ಪ್ರಜ್ವಲ್ ರೇವಣ್ಣ ಸ್ಪರ್ಧೆ ಹಾಗೆ ಕೋಲಾರ ಲೋಕಸಭಾ ಕ್ಷೇತ್ರದಿಂದ ನಿಸರ್ಗ ನಾರಾಯಣಸ್ವಾಮಿ ಸ್ಪರ್ಧೆ ಬಹುತೇಕ ಖಚಿತವಾಗಿದೆ ಎಂದು ಹೇಳಲಾಗುತ್ತಿದೆ.
Advertisement. Scroll to continue reading.