ಬೆಂಗಳೂರು: ಬಹು ನಿರೀಕ್ಷಿತ ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲ ಚರಣದ ಪಂದ್ಯಗಳ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಗುರುವಾರ ಪ್ರಕಟ ಮಾಡಿದೆ. ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕಾದಾಟ ನಡೆಸಲಿವೆ.
ಮಾರ್ಚ್ 22ರಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಹೈ ವೋಲ್ಟೇಜ್ ಉದ್ಘಾಟನಾ ಪಂದ್ಯ ನಡೆಯಲಿದೆ.
ಸಾರ್ವತ್ರಿಕ ಚುನಾವಣೆ ಗಮನದಲ್ಲಿಟ್ಟು ಟೂರ್ನಿಯ ಮೊದಲ 22 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರವೇ ಬಿಸಿಸಿಐ ಪ್ರಕಟ ಮಾಡಿದೆ. ಈ ಪಂದ್ಯಗಳ 17 ದಿನಗಳ ಒಳಗೆ ಆಯೋಜನೆ ಆಗಲಿವೆ. ಮಾರ್ಚ್ 22ರಿಂದ ಏಪ್ರಿಲ್ 7ರವರೆಗೆ ನಡೆಯಲಿರುವ ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರವೇ ಬಿಸಿಸಿಐ ಹಂಚಿಕೊಂಡಿದೆ.
Advertisement. Scroll to continue reading.
ಸಾರ್ವತ್ರಿಕ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದ ನಂತರ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಲಾಗುವುದು ಎಂದು ಬಿಸಿಸಿಐ ತಿಳಿಸಿದೆ. ಸಾರ್ವತ್ರಿಕ ಚುನಾವಣೆ ಏಪ್ರಿಲ್ ಮೇನಲ್ಲಿ ನಡೆಯುವ ಸಾಧ್ಯತೆ ಇದೆ.
ಐಪಿಎಲ್ ಟೂರ್ನಿಯಲ್ಲಿ ಹತ್ತು ತಂಡಗಳು ಭಾಗವಹಿಸುತ್ತಿದ್ದು, ತಲಾ ಐದು ತಂಡಗಳ ಎರಡು ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಲೀಗ್ ಹಂತದಲ್ಲಿ ಪ್ರತಿ ತಂಡ ತಲಾ 14 ಪಂದ್ಯಗಳನ್ನಾಡಲಿದೆ.
Advertisement. Scroll to continue reading.