ಮಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಗಿಸಿ ಖುಷಿಯಿಂದ ಈಜಲೆಂದು ನದಿಗೆ ಹೋಗಿ ನಾಪತ್ತೆಯಾಗಿದ್ದ ನಾಲ್ಕು ಮಕ್ಕಳ ಶವಗಳು ಪತ್ತೆಯಾಗಿವೆ. ಈ ಮಕ್ಕಳು ಮಂಗಳೂರಿನ ಸುರತ್ಕಲ್‌ನ ವಿದ್ಯಾದಾಯಿನಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಾಗಿದ್ದಾರೆ.
ಯಶ್ವಿತ್ ಚಂದ್ರಕಾಂತ್, ನಿರೂಪ್, ಅನ್ವಿತ್ ಮತ್ತು ರಾಘವೇಂದ್ರ ಮೃತಪಟ್ಟವರು. ಹಳೆಯಂಗಡಿ ಬಳಿಯ ನದಿಯಲ್ಲಿ ನಾಲ್ವರು ವಿದ್ಯಾರ್ಥಿಗಳ ಶವ ಪತ್ತೆಯಾಗಿದೆ. ನಾಲ್ವರು ಮೃತರು ಮಂಗಳವಾರ ಮಧ್ಯಾಹ್ನ 1:30ರ ಸುಮಾರಿಗೆ ನಾಪತ್ತೆಯಾಗಿದ್ದರು. ಶಾಲಾ ಪರೀಕ್ಷೆ ನಂತರ ನದಿಗೆ ಈಜಲು ಹೋಗಿ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
Advertisement. Scroll to continue reading.
ಇವರು ಆಂಗ್ಲ ಭಾಷಾ ಪರೀಕ್ಷೆಯನ್ನು ಬರೆದಿದ್ದು, ಪರೀಕ್ಷೆಯ ಬಳಿಕ ನಾಪತ್ತೆಯಾಗಿದ್ದರು. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಕ್ಕಳ ಪೋಷಕರು ಮತ್ತು ಪೊಲೀಸರು ಮಕ್ಕಳಿಗಾಗಿ ಹುಡುಕಾಟ ನಡೆಸಿದ್ದರು. ಪರೀಕ್ಷೆ ಒತ್ತಡದಿಂದ ಮಕ್ಕಳು ಓಡಿಹೋಗಿರಬಹುದು ಎಂದು ಮೊದಲು ಶಂಕಿಸಲಾಗಿತ್ತು.
ಹಳೆಯಂಗಡಿ ರೈಲ್ವೇ ಸೇತುವೆ ಕೆಳಭಾಗದಲ್ಲಿ ವಿದ್ಯಾರ್ಥಿಗಳ ಶಾಲಾ ಬ್ಯಾಗ್‌ಗಳು ಹಾಗೂ ಸಮವಸ್ತ್ರ ಪತ್ತೆಯಾಗಿದ್ದವು. ನದಿಯಲ್ಲಿ ಹುಡುಕಾಟ ನಡೆಸಿದಾಗ ನಾಲ್ವರು ವಿದ್ಯಾರ್ಥಿಗಳ ಶವ ಪತ್ತೆಯಾಗಿ
ಮಕ್ಕಳು ನೇರವಾಗಿ ಶಾಲೆಯಿಂದ ಹಳೆಯಂಗಡಿ ನದಿಗೆ ಈಜಾಡಲು ಬಂದಿರುವ ಶಂಕೆ ಇದೆ. ಒಬ್ಬ ಮುಳುಗತೊಡಗಿದಾಗ ರಕ್ಷಿಸಲು ಹೋದ ಉಳಿದವರು ಮುಳುಗಿ ಸತ್ತಿರಬಹುದು ಎಂದು ಶಂಕಿಸಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.