ನವದೆಹಲಿ: ಅಕ್ಟೋಬರ್- ಡಿಸೆಂಬರ್ ಅವಧಿಯ ಮೂರನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆ ನಿರೀಕ್ಷೆಗೂ ಮೀರಿ ವೃದ್ಧಿಯಾಗಿದೆ. ಈ ಅವಧಿಯಲ್ಲಿ ಹಲವು ಸಂಸ್ಥೆಗಳು ಜಿಡಿಪಿ ಶೇ.6.6 ರಷ್ಟು ಪ್ರಗತಿ ಸಾಧಿಸಬಹುದು ಎಂದು ಅಂದಾಜು ಮಾಡಿದ್ದವು. ಆದರೆ ಈ ನಿರೀಕ್ಷೆಗೂ ಮೀರಿ ಜಿಡಿಪಿ ಶೇ.8.4 ರಷ್ಟು ಪ್ರಗತಿ ಸಾಧಿಸಿದೆ.
ಕಳೆದ ಹಣಕಾಸು ವರ್ಷದ ಈ ಅವಧಿಯಲ್ಲಿ ಶೇ.4.3 ಜಿಡಿಪಿ ಪ್ರಗತಿ ಸಾಧಿಸಿತ್ತು. ನಿರ್ಮಾಣ ವಲಯದ (ಶೇ.10.7), ಉತ್ಪಾದನಾ ವಲಯ (ಶೇ.8.5), ಫೈನಾನ್ಸ್, ರಿಯಲ್ ಎಸ್ಟೇಟ್ ಇತ್ಯಾದಿ ಕ್ಷೇತ್ರ(ಶೇ.8.2) ಬೆಳವಣಿಗೆ ಸಾಧಿಸಿದೆ. ಆದರೆ ದೇಶದಲ್ಲಿ ಬರದಿಂದಾಗಿ ಕೃಷಿ ಕ್ಷೇತ್ರದಲ್ಲಿ ಮಾತ್ರ ಶೇ.0.7 ಬೆಳವಣಿಗೆಯಾಗಿರುವುದು ಕಳವಳಕ್ಕೆ ಕಾರಣವಾಗಿದೆ
2023-24ರ ಮೂರನೇ ತ್ರೈಮಾಸಿಕದಲ್ಲಿ ಸ್ಥಿರ (2011-12) ದರಗಳಲ್ಲಿ ಜಿಡಿಪಿ 43.72 ಲಕ್ಷ ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದು 2022-23 ರ ಮೂರನೇ ತ್ರೈಮಾಸಿಕದಲ್ಲಿ 40.35 ಲಕ್ಷ ಕೋಟಿ ರೂ ಆಗಿತ್ತು.
Advertisement. Scroll to continue reading.