ಬೆಂಗಳೂರು: ವಿಧಾನಸೌಧದ ಒಳಗೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದು ವಿಧಿ ವಿಜ್ಞಾನ ಪ್ರಯೋಗಾಲಯ (FSL) ಪರೀಕ್ಷೆಯಲ್ಲಿ ದೃಢವಾಗಿದೆ ಎಂದು ಬಿಜೆಪಿ ಹೇಳಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ “ವಿಧಾನಸೌಧದ ಒಳಗೆ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಎಫ್ಎಸ್ಎಲ್ ವರದಿಯಲ್ಲಿ ಬಹಿರಂಗವಾಗಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ” ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ.
ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ. ರಾಷ್ಟ್ರ ವಿರೋಧಿ ಧೋರಣೆಯ ಕಾಂಗ್ರೆಸ್ ಹಾಗೂ ಸುಳ್ಳು ಸುದ್ದಿ ಕಾರ್ಖಾನೆಯ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಈಗಲಾದರೂ ತಮ್ಮ ದೇಶದ್ರೋಹದ ಕೃತ್ಯವನ್ನು ಒಪ್ಪಿಕೊಂಡು ವಿಧಾನಸೌಧದ ಎದುರು ಸಾಷ್ಟಾಂಗ ನಮಸ್ಕಾರ ಮಾಡಿ ಕನ್ನಡಿಗರ ಕ್ಷಮೆ ಕೋರಬೇಕು” ಎಂದು ಹೇಳಿದೆ.
Advertisement. Scroll to continue reading.
ಆದರೆ ಈ ವರದಿಯನ್ನು ಸಂವಾದ ಫೌಂಡೇಶನ್ ಎಂಬ ಖಾಸಗಿ ಸಂಸ್ಥೆ ತಯಾರಿಸಿದೆ ಎಂದು ಹೇಳಲಾಗುತ್ತಿದ್ದು ಇದರ ಸತ್ಯಾಸತ್ಯತೆ ಬಗ್ಗೆ ಪರಿಶೀಲಿಸಬೇಕಿದೆ.