ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಲಭ್ಯವಾಗಿದ್ದು, ಬಾಂಬರ್ ಭಟ್ಕಳಕ್ಕೆ ತೆರಳಿರುವ ಶಂಕೆ ವ್ಯಕ್ತವಾಗಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರಿನ ಸುಜಾತ ಸರ್ಕಲ್‌ನಲ್ಲಿ ಬಾಂಬರ್ ಬಸ್ ಹತ್ತಿ ತುಮಕೂರಿನಲ್ಲಿ ಇಳಿದಿದ್ದು, ನಂತರ ತುಮಕೂರಿನಿಂದ ಬಳ್ಳಾರಿಗೆ ಬಸ್‌ನಲ್ಲಿ ಬಂದು ನಂತರ ಮಂತ್ರಾಲಯ- ಗೋಕರ್ಣ ಬಸ್ ಹತ್ತಿ ಭಟ್ಕಳಕ್ಕೆ ತೆರಳಿರುವ ಶಂಕೆ ವ್ಯಕ್ತವಾಗಿದೆ.
ಈ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ರಾಷ್ಟ್ರೀಯ ತನಿಖಾ ದಳ ಬಳ್ಳಾರಿ ಮತ್ತು ತುಮಕೂರು ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಶೋಧ ನಡೆಸಿ, ಮಾಹಿತಿ ಕಲೆ ಹಾಕಿದೆ.
Advertisement. Scroll to continue reading.
ತಡರಾತ್ರಿಯಿಂದ ಬೆಳಗಿನ ಜಾವದವರೆಗೂ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಎನ್‌ಐಎ ತಂಡ ಮಾಹಿತಿ ಪಡೆದಿದ್ದು ಬಳ್ಳಾರಿ ಮತ್ತು ತುಮಕೂರು ಪೊಲೀಸರು ಸಹಕಾರ ನೀಡಿದ್ದಾರೆ.
ಬೆಂಗಳೂರಿಂದ ಎರಡು ಕಾರುಗಳಲ್ಲಿ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆಂದು ವರದಿಗಳು ತಿಳಿಸಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನ (ಸುಳಿವು ಕೊಟ್ಟವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ.
ಎನ್‌ಐಎ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದು, ಶಂಕಿತನ ಸುಳಿವು ನೀಡಿದವರ ಹೆಸರು ಗೌಪ್ಯವಾಗಿ ಇಡುವುದಾಗಿ ತಿಳಿಸಿದೆ. ಇಲ್ಲಿಯವರೆಗೆ ಆರೋಪಿ ಚಹರೆ ಕಾಣುವ ಫೋಟೋ ಇರಲಿಲ್ಲ. ಎನ್‌ಐಎ ಬಿಡುಗಡೆ ಮಾಡಿರುವ ಫೋಟೋದಲ್ಲಿ ಅಲ್ಪ ಸ್ವಲ್ಪ ಮುಖ ಕಾಣಿಸುತ್ತದೆ.
Advertisement. Scroll to continue reading.