ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ನಡೆದು ವಾರ ಕಳೆದರೂ ಬಾಂಬರ್ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಈ ನಿಟ್ಟಿನಲ್ಲಿ ತನಿಖೆ ಚುರುಕುಗೊಳಿಸಿರುವ ಎನ್ಐಎ ಅಧಿಕಾರಿಗಳು, ಶಂಕಿತನ ಮತ್ತೆರಡು ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ.
ಒಂದರಲ್ಲಿ ಶಂಕಿತ ಬಾಂಬರ್ ಬಿಎಂಟಿಸಿ ಬಸ್ ಹತ್ತಿ, ಹಿಂದಿನ ಸೀಟ್ನಲ್ಲಿ ಕುಳಿತುಕೊಳ್ಳುತ್ತಾನೆ. ಮತ್ತೊಂದು ವಿಡಿಯೋದಲ್ಲಿ ಬೇರೆ ಬಟ್ಟೆ ಧರಿಸಿದಂತೆ ಕಾಣುತ್ತಿದ್ದು, ಕ್ಯಾಪ್ ಹಾಗೂ ಮಾಸ್ಕ್ ತೆಗೆದು, ಆ ಕಡೆಯಿಂದ ಈ ಕಡೆ ಓಡಾಡುತ್ತಿರುವುದು ಕಂಡು ಬಂದಿದೆ.
ಈ ಕುರಿತು ಸಾರ್ವಜನಿಕ ಪ್ರಕಟಣೆ ಹೊರಡಿಸಿರುವ ಎನ್‌ಐಎ, ಮಾಹಿತಿ ನೀಡಿದವರ ಹೆಸರನ್ನು ಗೋಪ್ಯವಾಗಿ ಇಡಲಾಗುವುದು ಎಂದು ಹೇಳಿದೆ.
Advertisement. Scroll to continue reading.
ಶಂಕಿತ ಬಾಂಬರ್ನ ಸುಳಿವು ಸಿಕ್ಕ ಕೂಡಲೇ 080 29510900, 8904241100 ಹಾಗೂ ಇ–ಮೇಲ್ ವಿಳಾಸ info.blr.nia@gov.inಗೆ ಮಾಹಿತಿ ನೀಡಬಹುದು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
ಇನ್ನು ಪ್ರಕರಣ ಸಂಬಂಧ ಶಂಕಿತ ಉಗ್ರ ಬಳ್ಳಾರಿಯ ಮಿನಾಜ್ ಅಲಿಯಾಸ್ ಸುಲೇಮಾನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
ಇದೇ ವೇಳೆ ನ್ಯಾಯಾಲಯದ ಆದೇಶದ ಮೇರೆಗೆ ಬಳ್ಳಾರಿಯ ಸೈಯದ್ ಸಮೀರ್, ಮುಂಬೈ ನ ಅನಾಸ್ ಇಕ್ಬಾಲ್ ಶೇಖ್ ಹಾಗೂ ದೆಹಲಿಯ ಶಯಾನ್ ರಹಮಾನ್ ಅಲಿಯಾಸ್ ಹುಸೈನ್ ನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
Advertisement. Scroll to continue reading.