ಚಂಡೀಗಢ: ಹರಿಯಾಣದಲ್ಲಿ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಕುರುಕ್ಷೇತ್ರದ ಸಂಸದ ನಯಾಬ್ ಸಿಂಗ್ ಸೈನಿ ಅವರು ಮಂಗಳವಾರ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಬೆಳಗ್ಗೆ ಮುಖ್ಯಮಂತ್ರಿ ಖಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಸೈನಿ ಅವರು ಮಂಗಳವಾರ ಬೆಳಗ್ಗೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ನಂತರ ಮಧ್ಯಾಹ್ನ ರಾಜಭವನಕ್ಕೆ ತೆರಳಿ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರನ್ನು ಭೇಟಿ ಮಾಡಿ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.
ಕೇಂದ್ರ ಸಚಿವ ಅರ್ಜುನ್ ಮುಂಡಾ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್, ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ಹರಿಯಾಣ ಬಿಜೆಪಿ ಉಸ್ತುವಾರಿ ಬಿಪ್ಲಬ್ ದೇಬ್ ಅವರು ಸೈನಿ ಸಾಥ್ ನೀಡಿದರು.
Advertisement. Scroll to continue reading.
ಮಂಗಳವಾರ ಸಂಜೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನಯಾಬ್ ಸಿಂಗ್ ಸೈನಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಸೈನಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಲೋಕಸಭೆ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇರುವಾಗ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಹರಿಯಾಣ ಮುಖ್ಯಮಂತ್ರಿಯನ್ನು ಬದಲಾಯಿಸಿರುವುದು ಅಚ್ಚರಿ ಮೂಡಿಸಿದೆ. ಅಕ್ಟೋಬರ್‌ನಲ್ಲಿ ಹರಿಯಾಣ ವಿಧಾನಸಭೆ ಚುನಾವಣೆ ನಡೆಯಲಿದೆ.
Advertisement. Scroll to continue reading.