ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮತ ಸೆಳೆಯಲು ಕಾಂಗ್ರೆಸ್ ಪಕ್ಷವು ‘ಶ್ರಮಿಕ್ ನ್ಯಾಯ್’ ಹಾಗೂ ‘ಹಿಸ್ಸೇದಾರಿ ನ್ಯಾಯ್’ ಸೇರಿದಂತೆ ಒಟ್ಟು ಐದು ಹೊಸ ಗ್ಯಾರಂಟಿಗಳನ್ನು ಶನಿವಾರ ಘೋಷಣೆ ಮಾಡಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಚುನಾವಣಾ ಆಯೋಗ ಇಂದು ಸಂಜೆ ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆ ಮಾಡಲಿರುವುದರಿಂದ, ದೆಹಲಿಯಿಂದ ಈ ಘೋಷಣೆಗಳನ್ನು ಮಾಡುವ ಬದಲು ಬೆಂಗಳೂರಿನಿಂದ ಮಾಡುತ್ತಿದ್ದೇನೆ ಎಂದರು.
ನಾವು 15 ಅಂಶಗಳ ಕಾರ್ಯಕ್ರಮ ರೂಪಿಸಿದ್ದು, ಕಿಸಾನ್ ನ್ಯಾಯ್, ಯುವ ನ್ಯಾಯ್ ಗ್ಯಾರಂಟಿಗಳನ್ನು ಈಗಾಗಲೇ ಘೋಷಿಸಿದ್ದೇವೆ. ಶ್ರಮಿಕ್ ನ್ಯಾಯ್, ಹಿಸ್ಸೇದಾರ್ ನ್ಯಾಯ್ ಘೋಷಣೆಗಳು ಹಿಂದುಳಿದ ವರ್ಗಗಳು, ಬಡವರಿಗೆ ಅನುಕೂಲ ಆಗುವಂತವು. ಎಲ್ಲರಿಗೂ ಸಮಾನ ನ್ಯಾಯ ಸಿಗಬೇಕು. ಸಾಮಾಜಿಕ, ರಾಜಕೀಯ ಸಮಾನತೆ ಎಲ್ಲರಿಗೆ ಸಿಗಬೇಕು. ಸಂಘಟಿತ, ಅಸಂಘಟಿತ ಕಾರ್ಮಿಕರಿಗೆ ಕಾರ್ಯಕ್ರಮ, ಸಾಮಾಜಿಕ ನ್ಯಾಯ, ಕನಿಷ್ಠ ವೇತನ ಕಾಯ್ದೆ. ಭವಿಷ್ಯ ನಿಧಿ ಕಾಯ್ದೆ, ವಿಮೆ ಕಾಯ್ದೆ ಹೊಸ ಗ್ಯಾರಂಟಿಯಲ್ಲಿ ಇರಲಿದೆ. ನಮ್ಮ ಸರ್ಕಾರ ಬಂದರೆ ಈ ಎಲ್ಲ ಯೋಜನೆಗಳನ್ನು ಜಾರಿಗೆ ತರಲಿದೆ ಎಂದರು.
Advertisement. Scroll to continue reading.
ಅಲ್ಲದೆ ‘ಬಡ ಮತ್ತು ಶ್ರೀಮಂತರ ನಡುವೆ ಇರುವ ಅಂತರ ಕಡಿಮೆ ಮಾಡುವುದು ಜಾತಿಗಣತಿ ಮಾಡುವ ನಮ್ಮ ಗ್ಯಾರಂಟಿಯ ಉದ್ದೇಶ. ಇದರಿಂದ ಸಮುದಾಯಗಳ ಅಭಿವೃದ್ಧಿ ವಿಚಾರಕ್ಕೆ ಅನುಕೂಲ ಆಗಲಿದೆ. ಶಿಕ್ಷಣ ಮತ್ತು ಸಾಮಾಜಿಕ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅನುಕೂಲವಾಗಲಿದೆ. ಕರ್ನಾಟಕ ಈಗಾಗಲೇ ಜಾತಿ ಗಣತಿ ವರದಿ ಸ್ವೀಕರಿಸಿದೆ ಎಂದು ಹೇಳಿದರು.
Advertisement. Scroll to continue reading.