ವುಮೆನ್ಸ್ ಪ್ರೀಮಿಯರ್ ಲೀಗ್ ಇತ್ತೀಚೆಗೆ ಮುಕ್ತಾಯವಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಮತ್ತೊಂದೆಡೆ ಪಾಕಿಸ್ತಾನ್ ಸೂಪರ್ ಲೀಗ್‌ಗೂ ತೆರೆಬಿದ್ದಿದ್ದು, ಇಸ್ಲಾಮಾಬಾದ್ ಯುನೈಟೆಡ್ ತಂಡ ಚಾಂಪಿಯನ್ ಆಗಿದೆ.
ಇದರ ಬೆನ್ನಲ್ಲೇ ಉಭಯ ಲೀಗ್‌ಗಳ ಬಹುಮಾನ ಮೊತ್ತ ಕೂಡ ಚರ್ಚೆಗೆ ಕಾರಣವಾಗಿದೆ. ಏಕೆಂದರೆ ಪಾಕಿಸ್ತಾನ್ ಸೂಪರ್ ಲೀಗ್‌ಗಿಂತಲೂ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಅಧಿಕ ಬಹುಮಾನ ಮೊತ್ತವನ್ನು ಪಾವತಿಸಲಾಗುತ್ತಿದೆ.
ಪಾಕಿಸ್ತಾನ್ ಸೂಪರ್ ಲೀಗ್ ಶುರುವಾಗಿ 9 ವರ್ಷಗಳೇ ಕಳೆದಿವೆ. ಇದಾಗ್ಯೂ ಪಿಎಸ್ಎಲ್‌ನ ಬಹುಮಾನ ಮೊತ್ತ ಇನ್ನೂ ಕೂಡ 9 ಕೋಟಿಯ ಅಸುಪಾಸಿಗೂ ತಲುಪಿಲ್ಲ. ಆದರೆ ಕೇವಲ 2 ಸೀಸನ್ ಪೂರೈಸಿರುವ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಪಿಎಸ್ಎಲ್ ಗಿಂತಲೂ ಹೆಚ್ಚಿನ ಬಹುಮಾನ ಮೊತ್ತ ನೀಡಲಾಗುತ್ತಿದೆ.
Advertisement. Scroll to continue reading.
ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-2 ರ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 8 ವಿಕೆಟ್ಗಳ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಡೆದಿರುವ ಬಹುಮಾನ ಮೊತ್ತ ಬರೋಬ್ಬರಿ 6 ಕೋಟಿ ರೂ. ಇನ್ನು ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ತಂಡವು 3 ಕೋಟಿ ರೂ. ಪಡೆದುಕೊಂಡಿದೆ.
ಪಾಕಿಸ್ತಾನ್ ಸೂಪರ್ ಲೀಗ್ ಸೀಸನ್-9 ರ ಫೈನಲ್‌ನಲ್ಲಿ ಮುಲ್ತಾನ್ ಸುಲ್ತಾನ್ಸ್ ವಿರುದ್ಧ ಇಸ್ಲಾಮಾಬಾದ್ ಯುನೈಟೆಡ್ ತಂಡವು 2 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿರುವ ಇಸ್ಲಾಮಾಬಾದ್ ಯುನೈಟೆಡ್ ತಂಡಕ್ಕೆ ಸಿಕ್ಕಿರುವ ಬಹುಮಾನ ಮೊತ್ತ 4.15 ಕೋಟಿ ರೂ. ಹಾಗೆಯೇ ರನ್ನರ್ ಅಪ್ ಮುಲ್ತಾನ್ ಸುಲ್ತಾನ್ಸ್ ತಂಡಕ್ಕೆ ಕೇವಲ 1.6 ಕೋಟಿ ರೂ. ನೀಡಲಾಗಿದೆ.
ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್ಗೆ ಹೋಲಿಸಿದರೆ ಪಾಕಿಸ್ತಾನ್ ಸೂಪರ್ ಲೀಗ್ ಬಹುಮಾನ ಮೊತ್ತ 1.85 ಕೋಟಿ ರೂ. ಕಡಿಮೆ ಇದೆ. ಇನ್ನು ಐಪಿಎಲ್ಗೆ ಹೋಲಿಸುವುದೇ ಬೇಡ, ಏಕೆಂದರೆ ಇಂಡಿಯನ್ ಪ್ರೀಮಿಯರ್ ಲೀಗ್ ಬಹುಮಾನ ಮೊತ್ತ ಬರೋಬ್ಬರಿ 20 ಕೋಟಿ ರೂ.
Advertisement. Scroll to continue reading.