ಚಂಡೀಗಢ: ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಸೋಮವಾರ ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 14 ಅರ್ಚಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೋಳಿ ಹಬ್ಬದ ಪ್ರಯುಕ್ತ ದೇವಾಲಯದ ಗರ್ಭಗುಡಿಯಲ್ಲಿ ಭಸ್ಮ ಆರತಿ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಹೋಳಿ ಆಚರಿಸಲು ಗುಲಾಲ್ ಎಸೆಯಲಾಗುತ್ತಿತ್ತು. ಈ ವೇಳೆ ಕೆಲ ಗುಲಾಲ್, ಕರ್ಪೂರವನ್ನು ಹೊಂದಿದ್ದ ಪೂಜೆಯ ತಾಲಿಯ ಮೇಲೆ ಬಿದ್ದವು. ಕರ್ಪೂರ ನೆಲದ ಮೇಲೆ ಬಿದ್ದು ಬೆಂಕಿ ವ್ಯಾಪಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆ ದೃಶ್ಯ ದೇವಸ್ಥಾನದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
14 ಪುರೋಹಿತರಿಗೆ ಸುಟ್ಟ ಗಾಯಗಳಾಗಿವೆ. ಕೆಲವರು ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂಟು ಮಂದಿ ಇಂದೋರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ. ಜಿಲ್ಲಾ ಪಂಚಾಯತ್ ಸಿಇಒ ಮೃಣಾಲ್ ಮೀನಾ ಮತ್ತು ಹೆಚ್ಚುವರಿ ಜಿಲ್ಲಾಧಿಕಾರಿ ಅನುಕೂಲ್ ಜೈನ್ ಅವರು ತನಿಖೆ ನಡೆಸಿ ವರದಿ ನೀಡುತ್ತಾರೆ. ಮೂರು ದಿನಗಳಲ್ಲಿ ಸಲ್ಲಿಸಲಾಗುವುದು ಎಂದು ತಿಳಿದುಬಂದಿದೆ.
Advertisement. Scroll to continue reading.
ಕೆಲವು ವಿವಿಐಪಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯ ಜನರು ದೇವಾಲಯದಲ್ಲಿ ಉಪಸ್ಥಿತರಿದ್ದರು. ಆದರೆ ಯಾವುದೇ ಭಕ್ತರು ಗಾಯಗೊಂಡಿಲ್ಲ. ದೇವಾಲಯದ ಸಿಬ್ಬಂದಿ ಮತ್ತು ಸಂಜಯ್ ಗುರುಗಳ ಮುಖ್ಯ ಅರ್ಚಕ ಸೇರಿದಂತೆ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.