ಅರೆ ಹೌದಾ!

VIDEO: ಬಿಕಿನಿ ತೊಟ್ಟು ಬಸ್ ಹತ್ತಿದ ಮಹಿಳೆ: ಸೀಟು ಬಿಟ್ಟು ಹೋದ ಪ್ರಯಾಣಿಕ

1

ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ.

ಇತ್ತೀಚಿನ ದಿನಗಳಲ್ಲಿ ಸೋಶಿಯಲ್‌ ಮೀಡಿಯಾದಲ್ಲಿ ಟ್ರೆಂಡ್‌ ಸೃಷ್ಟಿಸೋದು ಕೆಲವರಿಗೆ ಅಭ್ಯಾಸ ಆಗಿಬಿಟ್ಟಿದೆ. ಅದರಲ್ಲೂ ದೆಹಲಿಯಂತಹ ಮಹಾನಗರದಲ್ಲಿ ಇದು ಹೆಚ್ಚಾಗಿಯೇ ನಡೆಯುತ್ತಿದೆ. ಈ ಹಿಂದೆ ದೆಹಲಿ ಮೆಟ್ರೋದಲ್ಲಿ ಕಂಡುಬರುತ್ತಿದ್ದ ಅಶ್ಲೀಲ ಕೃತ್ಯಗಳು ಈಗ ಸಾರ್ವಜನಿಕ ಬಸ್‌ನಲ್ಲೂ ಕಂಡುಬಂದಿದೆ.

ಬಿಕಿನಿ ತೊಟ್ಟು ಬಸ್‌ ಹತ್ತಿದ ಮಹಿಳೆ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಇದು ಆಕೆಯ ಸ್ವಾತಂತ್ರ್ಯ ಎಂದು ಸಮರ್ಥಿಸಿಕೊಂಡಿದ್ದರೆ, ಮತ್ತೆ ಕೆಲವರು ಇದು ಸ್ವೇಚ್ಚಾಚಾರ, ಅಶ್ಲೀಲಕ್ಕೆ ಪ್ರಶೋದನೆ ನೀಡುವಂತಹ ಕೆಲಸ ಇಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಕೆಲವರು ಬೇಸಿಗೆ ಅಲ್ವಾ ಶೆಕೆ ಇರಬೇಕು ಅಂತ ಕಾಲೆಳೆದಿದ್ದಾರೆ.

Advertisement. Scroll to continue reading.

ದೆಹಲಿ ಬಸಸ್‌ ಎನ್ನುವ ಎಕ್ಸ್‌ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದು, ಇದನ್ನು ದೆಹಲಿ ಸಾರಿಗೆ ಅಧಿಕಾರಿಗಳಿಗೂ ಟ್ಯಾಗ್‌ ಮಾಡಿದ್ದಾರೆ. ಸದ್ಯ ಈ ಬಗ್ಗೆ ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಹಿಂದೆ ದೆಹಲಿ ಮೆಟ್ರೋದಲ್ಲಿಯೂ ಇಂತಹದ್ದೇ ಘಟನೆ ನಡೆದಿತ್ತು.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com