ರಾಷ್ಟ್ರೀಯ

ಚಲಿಸುತ್ತಿದ್ದ ರೈಲಿನಲ್ಲೇ ಪತ್ನಿಗೆ ತಲಾಕ್ ನೀಡಿ ಪರಾರಿಯಾದ ಪತಿ

0

ಲಕ್ನೋ: ಚಲಿಸುತ್ತಿದ್ದ ರೈಲಿನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ತಲಾಖ್ ನೀಡಿ ಪರಾರಿಯಾಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.

ಮೊಹಮ್ಮದ್ ಅರ್ಷದ್ (28) ಎಂಬಾತ ತನ್ನ ಪತ್ನಿ ಅಫ್ಸಾನಾ (26) ಜೊತೆ ಪ್ರಯಾಣಿಸುತ್ತಿದ್ದಾಗ ತಲಾಕ್ ನೀಡಿದ್ದಾನೆ. ಬಳಿಕ ಆಕೆಗೆ ಥಳಿಸಿ, ರೈಲು ಝಾನ್ಸಿ ಜಂಕ್ಷನ್‍ಗೆ ತಲುಪುತ್ತಿದ್ದಂತೆ ರೈಲಿನಿಂದ ಇಳಿದು ಪರಾರಿಯಾಗಿದ್ದಾನೆ. ಏಪ್ರಿಲ್ 29 ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಅರ್ಷದ್, ಭೋಪಾಲ್‍ನ ಖಾಸಗಿ ಸಂಸ್ಥೆಯೊಂದರಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದ. ಅಫ್ಸಾನಾ ಹಾಗೂ ಅರ್ಷದ್ ಮ್ಯಾಟ್ರಿಮೋನಿಯಲ್ ವೆಬ್‍ಸೈಟ್‍ನಲ್ಲಿ ಪರಿಚಯವಾಗಿದ್ದು, ಈ ವರ್ಷ ಜನವರಿ 12 ರಂದು ಇಬ್ಬರು ಮದುವೆಯಾಗಿದ್ದರು ಎಂದು ತಿಳಿದು ಬಂದಿದೆ.

Advertisement. Scroll to continue reading.

ಕಳೆದ ವಾರ ದಂಪತಿ ಪುಖ್ರಾಯನ್‍ನಲ್ಲಿರುವ ಅರ್ಷದ್‍ನ ಸಂಬಂಧಿಯೊಬ್ಬರ ಮನೆಗೆ ಮನೆಗೆ ಭೇಟಿ ನೀಡಿದಾಗ, ಆತನಿಗೆ ಈಗಾಗಲೇ ಮದುವೆಯಾಗಿರುವುದು ತಿಳಿದು ಆಕೆ ಆಘಾತಕ್ಕೊಳಗಾಗಿದ್ದಾಳೆ. ಬಳಿಕ ಇಬ್ಬರ ನಡುವೆ ಗಲಾಟೆಯಾಗಿದೆ. ಮರಳಿ ಬರುವಾಗ ಇದೇ ವಿಚಾರಕ್ಕೆ ಆತ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗಲೇ ತಲಾಕ್ ನೀಡಿ ಮಹಿಳೆಗೆ ಥಳಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವಿಚಾರವಾಗಿ ಅಫ್ಸಾನಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಹಾಯ ಕೇಳಿದ್ದು, ಮಹಿಳೆಯರಿಗೆ ವಂಚಿಸುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾಳೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com