ನವದೆಹಲಿ : ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಪ್ರಕರಣ ಸಂಬಂಧ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಮುಂದಿನ ಜೂನ್ 1 ರ ವರೆಗೆ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಿ ಶುಕ್ರವಾರ ಆದೇಶಿಸಿದೆ.
ಈ ಮೂಲಕ ಅರವಿಂದ್ ಕೇಜ್ರಿವಾಲ್ ರ 50 ದಿನಗಳ ಜೈಲುವಾಸ ಅಂತ್ಯ ಕಂಡಿದೆ. ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಲು ಸುಪ್ರೀಂ ಕೋರ್ಟ್ ಅವಕಾಶ ನೀಡಿದೆ.
Advertisement. Scroll to continue reading.