ರಾಜ್ಯ

ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ಸಾವು

0

ಬೆಂಗಳೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯದ   ದೂರು ನೀಡಿದ್ದ  ಮಹಿಳೆ ಮೃತಪಟ್ಟಿದ್ದಾರೆ.

17 ವರ್ಷದ ತಮ್ಮ ಪುತ್ರಿ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆ ಬೆಂಗಳೂರಿನ ಸದಾಶಿವ ನಗರ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಮಾರ್ಚ್‌ 14ರಂದು ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣದ ದಾಖಲು ಮಾಡಲಾಗಿತ್ತು.

ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದ ಮಹಿಳೆ ಮೇ 26ರ ಭಾನುವಾರ ಬೆಂಗಳೂರಿನ ಹುಳಿಮಾವು ಪ್ರದೇಶದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Advertisement. Scroll to continue reading.

ಆಕೆಗೆ ಶ್ವಾಸಕೋಶದ ಕ್ಯಾನ್ಸರ್ ಇತ್ತು. ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಸೂಕ್ತ ಚಿಕಿತ್ಸೆಯನ್ನು ನೀಡಲಾಗಿತ್ತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ ಎಂಬುದಾಗಿ ವರದಿಯಾಗಿದೆ.

ಏನಿದು ಪ್ರಕರಣ ?

ಯಡಿಯೂರಪ್ಪನವರ ಬಳಿ ಸಹಾಯ ಕೋರಿ ಹೋಗಿದ್ದಾಗ ತಮ್ಮ ಪುತ್ರಿಯ ಜೊತೆಗೆ ಯಡಿಯೂರಪ್ಪನವರು ಅಸಭ್ಯವಾಗಿ ವರ್ತಿಸಿದ್ದರೆಂದು ಮಹಿಳೆ ಮಾರ್ಚ್ 14ರಂದು ದೂರು ದಾಖಲಿಸಿದ್ದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ನಿವಾಸದಲ್ಲಿ ಈ ಘಟನೆ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಈ ಆರೋಪವನ್ನು ತಿರಸ್ಕರಿಸಿದ್ದರು.

Advertisement. Scroll to continue reading.

ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿತ್ತು. ಸಿಐಡಿ ತಂಡದ ವತಿಯಿಂದ ತನಿಖೆಗೊಳಪಟ್ಟಿರುವ ಈ ಪ್ರಕರಣದಲ್ಲಿ ಅಧಿಕಾರಿಗಳು ಸಂತ್ರಸ್ತೆ ಹೇಳಿಕೆಗಳನ್ನು ಈಗಾಗಲೇ ದಾಖಲಿಸಿಕೊಂಡಿದ್ದಾರೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com