ರಾಜ್ಯ

ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಆತ್ಮಹತ್ಯೆ

0

ದಾವಣಗೆರೆ : ಮಾಜಿ ಸಚಿವ ಬಿ.ಸಿ ಪಾಟೀಲ್ ಅವರ ಅಳಿಯ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.


43 ವರ್ಷದ ಕೆ.ಜಿ ಪ್ರತಾಪ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡವರು. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಿಕೆರೆಯ ಶಿವಮೊಗ್ಗ-ಹರಿಹರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಕಾರು ನಿಲ್ಲಿಸಿ ವಿಷಸೇವಿಸಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.


ವಿಷ ಸೇವಿಸಿದ್ದ ಕೆ.ಜಿ ಪ್ರತಾಪ್ ಕುಮಾರ್ ಅವರನ್ನು ಸ್ಥಳೀಯರು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

Advertisement. Scroll to continue reading.

ಕೆಜಿ ಪ್ರತಾಪ್ ಕುಮಾರ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೆಜಿ ಪ್ರತಾಪ್ ಕುಮಾರ್ ಅವರು ಬಿ.ಸಿ ಪಾಟೀಲ್ ಹಿರಿಯ ಪುತ್ರಿ ಸೌಮ್ಯಾ ಅವರ ಪತಿ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com