Uncategorized

ಐಪಿಎಲ್ : ಹೈದರಾಬಾದ್ ವಿರುದ್ಧ ಸೂಪರ್ ಓವರ್ ನಲ್ಲಿ ಗೆದ್ದು ಬೀಗಿದ ಡೆಲ್ಲಿ

0

ಐಪಿಎಲ್ ನ 14 ನೇ ಆವೃತ್ತಿಯ ಮೊದಲ ಸೂಪರ್ ಓವರ್ ಪಂದ್ಯಾಟಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ಸಾಕ್ಷಿಯಾಯಿತು. ಸೂಪರ್ ಓವರ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆಲುವಿನ ನಗೆ ಬೀರಿದೆ.
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ 20 ಓವರ್ ಗಳಲ್ಲಿ 159 ರನ್ ಗಳಿಸಿತು. ಡೆಲ್ಲಿ ತಂಡದ ಪೃಥ್ವಿ ಶಾ, ಸ್ಟೀವ್ ಸ್ಮಿತ್ ಹಾಗೂ ರಿಷಭ್ ಪಂತ್ ಉತ್ತಮ ಬ್ಯಾಟಿಂಗ್ ಮಾಡಿದರು. ಗುರಿ ಬೆನ್ನಟ್ಟಿದ್ದ ಸನ್ ರೈಸರ್ಸ್ ಗೆಲುವಿನತ್ತ ಹೊರಟಿತಾದರೂ ಕೊನೆಯಲ್ಲಿ ಪಂದ್ಯವನ್ನು ಟೈ ಮಾಡುವಲ್ಲಿ ಯಶಸ್ವಿಯಾಯಿತು.

ಹೈದರಾಬಾದ್ ತಂಡದಲ್ಲಿ ಜಾನಿ ಬೈರ್ ಸ್ಟೋವ್ ಹಾಗೂ ಕೇನ್ ವಿಲಿಯಮ್ಸ್ ಉತ್ತಮ ಪ್ರದರ್ಶನ ನೀಡಿದರೂ ಡೆಲ್ಲಿ ನೀಡಿದ ಮೊತ್ತವನ್ನು ದಾಟಲು ಸಾಧ್ಯವಾಗಲಿಲ್ಲ. ಹೀಗಾಗಿ ಸೂಪರ್ ಓವರ್ ನಲ್ಲಿ ಪಂದ್ಯದ ಗೆಲುವು ನಿರ್ಧರಿಸಲಾಯಿತು.
ಸೂಪರ್ ಓವರ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ಕೇವಲ 7 ರನ್ ಗಳಿಸಿತು. ಡೆಲ್ಲಿ ಅಂತಿಮ ಎಸೆತದಲ್ಲಿ ಗುರಿ ಮುಟ್ಟುವಲ್ಲಿ ಯಶಸ್ವಿಯಾಯಿತು.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com