ವರದಿ : ಶ್ರೀದತ್ತ, ಹೆಬ್ರಿ
ಹೆಬ್ರಿ : ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ವಿಧಾನಸಭಾ ಮುಖ್ಯ ಸಚೇತಕ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಆಕ್ಸಿಜನ್ ಘಟಕದ ನೂತನ ಕಟ್ಟಡದ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಮಾತಾಡಿದ ಅವರು,
ಈ ಆಕ್ಸಿಜನ್ ಘಟಕ ಪ್ರಾರಂಭವಾದ ಕೂಡಲೇ ಇಪ್ಪತ್ತೈದು ಬೆಡ್ ಗಳಿಗೆ ನಿರಂತರವಾಗಿ ಆಕ್ಸಿಜನ್ ಪೂರೈಕೆ ಯಾಗುತ್ತದೆ. ಅತಿ ಶೀಘ್ರದಲ್ಲಿ ಇದರ ಉಪಯೋಗ ಸಾರ್ವಜನಿಕರಿಗೆ ಸಿಗಲಿದೆ ಎಂದರು.
ಹೆಬ್ರಿ ತಹಶೀಲ್ದಾರ್ ಪುರಂದರ್ ಕೆ. ಹೆಬ್ರಿ, ಗ್ರಾಪಂ ಅಧ್ಯಕ್ಷೆ ಮಾಲತಿ, ಉಪಾಧ್ಯಕ್ಷ ಗಣೇಶ್ ಕುಮಾರ್, ಅಭಿವೃದ್ಧಿ ಅಧಿಕಾರಿ ಸದಾಶಿವ ಸರ್ವೆಗಾರ್ ಹಾಗೂ ಸದಸ್ಯರು ಮಾಜಿ ಅಧ್ಯಕ್ಷ ಸುಧಾಕರ ಹೆಗ್ಡೆ ಮತ್ತು ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
Advertisement. Scroll to continue reading.