ಜೆರುಸಲೇಂ: ಗಾಜಾದ ಪ್ಯಾಲೇಸ್ತೀನ್ ಮೂಲದ ಭಯೋತ್ಪಾದಕ ಸಂಘಟನೆಯು ನಡೆಸಿದ ರಾಕೆಟ್ ದಾಳಿಯಲ್ಲಿ ಇಸ್ರೇಲ್ನಲ್ಲಿ ಕೆಲಸ ಮಾಡುತ್ತಿದ್ದ ಭಾರತದ ಮಹಿಳೆ ಮೃತಪಟ್ಟಿರುವ ಘಟನೆ ಇಸ್ರೇಲ್ ನಲ್ಲಿ ನಡೆದಿದೆ.
ಕೇರಳದ ಇಡುಕ್ಕಿ ಜಿಲ್ಲೆಯ 30 ವರ್ಷದ ಸೌಮ್ಯ ಸಂತೋಷ್ ಮೃತಪಟ್ಟವರು. ದಕ್ಷಿಣ ಇಸ್ರೇಲ್ನ ಕರಾವಳಿ ನಗರವಾದ ಅಶ್ಕೆಲೋನ್ನ ಮನೆಯೊಂದರಲ್ಲಿ ವೃದ್ಧರೊಬ್ಬರಿಗೆ ಆರೈಕೆ ಮಾಡುವ ಕೆಲಸ ಮಾಡುತ್ತಿದ್ದರು.
ಗಾಜಾ ಮೂಲದ ಉಗ್ರರು ಸೋಮವಾರ ಸಂಜೆಯಿಂದ ಇಸ್ರೇಲ್ ಮೇಲೆ ನೂರಾರು ರಾಕೆಟ್ ದಾಳಿ ನಡೆಸಿದ್ದು, ಮಂಗಳವಾರ ರಾತ್ರಿ 9 ಗಂಟೆಯ ವರೆಗೆ ದಾಳಿಯಲ್ಲಿ 31 ಮಂದಿ ಮೃತಪಟ್ಟಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇದಕ್ಕೆ ಪ್ರತಿಯಾಗಿ ಹಮಾಸ್ ಹಾಗೂ ಇಸ್ಲಾಮಿಕ್ ಜಿಹಾದಿ ಉಗ್ರರ ನೆಲೆ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದೆ ಎನ್ನಲಾಗಿದೆ.
Advertisement. Scroll to continue reading.