ಕರಾವಳಿ

ಅದಮಾರು : ಪೂರ್ಣಪ್ರಜ್ಞ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿ ಸಂಧ್ಯಾ ಮಹೇಶ್ ಅಧಿಕಾರ ಸ್ವೀಕಾರ

0

ಅದಮಾರು : ಅದಮಾರು ಪೂರ್ಣಪ್ರಜ್ಞ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ನೂತನ ಮುಖ್ಯೋಪಾಧ್ಯಾಯಿನಿಯಾಗಿ ಶ್ರೀಮತಿ ಸಂಧ್ಯಾ ಮಹೇಶ್ ಅವರು ಶುಕ್ರವಾರ ಅದಮಾರು ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು. ಎಂ.ಎಸ್ಸಿ, ಬಿ.ಎಡ್ ಪದವೀಧರರಾಗಿರುವ ಇವರು ಹದಿನಾರು ವರ್ಷಗಳ ಕಾಲ ಉಡುಪಿ ಪೂರ್ಣಪ್ರಜ್ಞ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ.

ಈ ಸಂದರ್ಭ ಗೌರವ ಕಾರ್ಯದರ್ಶಿ ಪ್ರದೀಪ್ ಕುಮಾರ್, ಸಂಸ್ಥೆಯ ಕೋಶಾಧಿಕಾರಿ ಪ್ರವೀಣ್ ಕುಮಾರ್, ಪ್ರಾಂಶುಪಾಲ ಎಂ.ರಾಮಕೃಷ್ಣ ಪೈ, ಉಪಪ್ರಾಂಶುಪಾಲೆ ಡಾ.ಒಲ್ವಿಟಾ ಡಿಸೋಜಾ, ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಯುತ ಶ್ರೀಕಾಂತ್ ರಾವ್, ಪೂರ್ವ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ನಿಶ್ಮಿತಾ ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಕೃತ ಉಪನ್ಯಾಸಕ ಡಾ.ಜಯ ಶಂಕರ್ ಕಂಗಣ್ಣಾರು ಕಾರ್ಯಕ್ರಮ ನಿರ್ವಹಿಸಿದರು.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com