ಬೆಂಗಳೂರು : ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರಿಗೆ ಅಪಘಾತವಾಗಿದ್ದು, ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾತ್ರಿ ತನ್ನ ಸ್ನೇಹಿತನೊಂದಿಗೆ ವಿಜಯ್ ಬೈಕ್ ನಲ್ಲಿ ಸಾಗುತ್ತಿದ್ದ ವೇಳೆ ಅಪಘಾತವಾಗಿದೆ. ಪರಿಣಾಮ ತಲೆಗೆ, ತೊಡೆಗೆ ತೀವ್ರ ಪೆಟ್ಟು ಬಿದ್ದಿದೆ. ಸ್ಥಿತಿ ಗಂಭೀರವಾಗಿದ್ದು, ಮೆದುಳಿನ ಬಲಭಾಗದಲ್ಲಿ ರಕ್ತಸ್ರಾವವಾಗಿದ್ದು ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ತೊಡೆ ಮೂಳೆಯ ಶಸ್ತ್ರ ಚಿಕಿತ್ಸೆಯನ್ನೂ ಮಾಡಲಿರುವ ಬಗ್ಗೆ ತಿಳಿದು ಬಂದಿದೆ.