ಕರಾವಳಿ

ಉಡುಪಿ : ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜಿಗೆ ಆಗ್ರಹ; ಕ್ಯಾಂಪಸ್ ಫ್ರಂಟ್ ನಿಂದ ತೀವ್ರ ಹೋರಾಟದ ಎಚ್ಚರಿಕೆ

0

ಉಡುಪಿ : ಹಲವು ವರ್ಷಗಳ ಬೇಡಿಕೆ ಆಗಿರುವಂತಹ ಸರ್ಕಾರಿ ವೈದ್ಯಕೀಯ ಕಾಲೇಜು ಇನ್ನೂ ಕೂಡ ಉಡುಪಿ ಜಿಲ್ಲೆಗೆ ಒದಗಿ ಬಂದಿಲ್ಲ. ಒಂದು ವಿದ್ಯಾರ್ಥಿ ಅವನ ಶಾಲಾ ಜೀವನದಲ್ಲಿ ಇರುವಾಗಲೇ ಆತನೊಬ್ಬ ವೈದ್ಯನಾಗಬೇಕೆಂಬ ಕನಸನ್ನು ಇಟ್ಟುಕೊಂಡು ಅದರ ಹಿಂದೆ ಬಹಳಷ್ಟು ಶ್ರಮವಹಿಸುತ್ತಾನೆ. ಆದರೆ ನೀಟ್ ಪರೀಕ್ಷೆ ಬರೆದ ನಂತರ ಕಾಲೇಜು ಪ್ರವೇಶ ಸಮಯದಲ್ಲಿ ಅಲ್ಲಿಯ ಶುಲ್ಕ ರಚನೆ ನೋಡಿದಾಗ ಅವನ ಕನಸನ್ನು ಬಿಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಲಕ್ಷಗಟ್ಟಲೆ ಫೀಸು ನೀಡಲು ಸಾಧ್ಯವಾಗದೆ ಮತ್ತು ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲದೆ ಇರುವುದರಿಂದ ಆ ವಿದ್ಯಾರ್ಥಿ ಶಿಕ್ಷಣದಿಂದ ಹಿಂಜರಿತಾನೆ. ಈ ವಿಚಾರದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಮುಖಾಂತರ ಸರ್ಕಾರಕ್ಕೆ ಬರುವಂತಹ ಬಜೆಟ್ ಅಧಿವೇಶನದಲ್ಲಿ ಈ ವಿಷಯವನ್ನು ಉಲ್ಲೇಖಿಸಬೇಕೆಂದು ಮನವಿ ಮಾಡಲಾಯಿತು. ಮನವಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾಧಿಕಾರಿಯಿಂದ ಬಂದಂತಹ ಉತ್ತರ ಒಂದು ಬೇಜವಾಬ್ದಾರಿತನದಾಗಿತ್ತು. ಉಡುಪಿ ಜಿಲ್ಲೆಯಲ್ಲಿ ಬಹಳಷ್ಟು ಕಡೆಗಳಲ್ಲಿ ಸರ್ಕಾರಿ ಭೂಮಿ ಇದ್ದರೂ ಕೂಡ ಜಿಲ್ಲಾಧಿಕಾರಿ ಸರ್ಕಾರಿ ವೈದ್ಯಕೀಯ ಕಾಲೇಜಿಗಾಗಿ ಸರ್ಕಾರದ ಭೂಮಿ ಇಲ್ಲ ಎಂದು ಹೇಳಿದ್ದಾರೆ. ಒಂದು ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿ ಈ ರೀತಿಯ ಉತ್ತರ ಕೊಡುವುದು ಎಷ್ಟರ ಮಟ್ಟಿಗೆ ಸರಿ? ಎಂದು ಕ್ಯಾಂಪಸ್ ಫ್ರಂಟ್ ಪ್ರಶ್ನಿಸಿದೆ.
ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿರುವ ಕ್ಯಾಂಪಸ್ ಫ್ರಂಟ್, ರಾಜ್ಯದಲ್ಲಿ ಸುಮಾರು 19 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಇದೆ. ಯಾವ ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲವೋ, ಅಲ್ಲಿ ಇರುವಂತಹ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಇಂತಿಷ್ಟು ಶೇಕಡದಷ್ಟು ಸರ್ಕಾರದ ಕೋಟಾ ಅಂತ ಇದೆ. ಒಂದು ಬುದ್ಧಿವಂತರ ಜಿಲ್ಲೆ ಎಂದು ಖ್ಯಾತ ಪಡೆದ ಉಡುಪಿ ಜಿಲ್ಲೆಗೆ ಒಂದು ಸರ್ಕಾರಿ ವೈದ್ಯಕೀಯ ಕಾಲೇಜು ಕೂಡ ಇಲ್ಲ, ಇಲ್ಲಿರುವಂತಹ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಸರ್ಕಾರದ ಕೋಟಾ ಕೂಡ ಇಲ್ಲ. ಇದೊಂದು ಉಡುಪಿ ಜಿಲ್ಲೆಗೆ ಆಗಿರುವಂತಹ ದೊಡ್ಡ ಅವಮಾನ ಮತ್ತು ದೊಡ್ಡ ಅನ್ಯಾಯ ಕೂಡ ಹೌದು. ಜಿಲ್ಲೆಯ ಉಸ್ತುವಾರಿ ಸಚಿವರಾದ ಗೃಹಮಂತ್ರಿಯವರಿಗೆ ಇದರ ಬಗ್ಗೆ ಗಮನ ಕೊಡಲು ಸಮಯವೇ ಇಲ್ಲದಾಗಿದೆ, ಜಿಲ್ಲೆಯ ಅಭಿವೃದ್ದಿಗೆ ಶ್ರಮವಹಿಸಲು ಸಾಧ್ಯವಾಗದ ಇವರು ರಾಜ್ಯದ ಗೃಹಮಂತ್ರಿ ಸ್ಥಾನವನ್ನು ಯಾವ ರೀತಿ ನಿಭಾಯಿಸುತ್ತಾರೆ ಎಂಬ ಕುತೂಹಲ ಮೂಡಿದೆ ಎಂದಿದೆ.
ಈಗಾಗಲೇ ಈ ವಿಚಾರದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿಯು ತಯಾರಾಗಿದೆ, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ #UdupiDemandsGovtMedicalCollege ಎಂಬ ಚಳುವಳಿಯನ್ನು ಆರಂಭಿಸಿದ್ದು, ಇದರ ಭಾಗವಾಗಿ ಈಗಾಗಲೇ ಹಲವಾರು ಜನಸಾಮಾನ್ಯರನ್ನು, ಪ್ರಗತಿಪರ ಚಿಂತಕರನ್ನು ಮತ್ತು ಇಲ್ಲಿರುವಂತಹ ವಿವಿಧ ಸಾಮಾಜಿಕ ಮತ್ತು ವಿದ್ಯಾರ್ಥಿ ಸಂಘಟನೆಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ. ಎಲ್ಲರೂ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ, ಮುಂದಿನ ದಿನಗಳಲ್ಲಿ ಎಲ್ಲರನ್ನೂ ಸೇರಿಸಿಕೊಂಡು ಒಂದು ಐತಿಹಾಸಿಕ ಆಂದೋಲನ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ನೇತೃತ್ವದಲ್ಲಿ ನಡೆಯಲಿದೆ. ಉಡುಪಿಯ ಜನರು ಇದಕ್ಕೆ ಸಾಕ್ಷಿಯಾಗಲಿದ್ದಾರೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ನಾವು ಈಗಾಗಲೇ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಈ ಹೋರಾಟವು ತೀವ್ರ ಸ್ವರೂಪ ಪಡೆಯಲಿಕ್ಕಿದೆ ಎಂದು ಎಚ್ಚರಿಸಿದೆ.
ಸುದ್ದಿಗೋಷ್ಠಿ ಉಡುಪಿ ಜಿಲ್ಲಾ ಕ್ಯಾಂಪಸ್ ಫ್ರಂಟ್ ನವಾಜ್ ಉಡುಪಿ, ಜಿಲ್ಲಾಧ್ಯಕ್ಷ ಅಸೀಲ್ ಅಕ್ರಂ, ಜಿಲ್ಲಾ ಕಾರ್ಯದರ್ಶಿ ಮಸೂದ್ ಮನ್ನಾ, ಜಿಲ್ಲಾ ಕಾರ್ಯದರ್ಶಿ ಅನ್ಫಾಲ್ ಗಂಗೊಳ್ಳಿ, ಝಮ್ ಝಮ್ ಉಪಸ್ಶಿತರಿದ್ದರು.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com