ಬೆಂಗಳೂರು : ರಾಜ್ಯದಲ್ಲಿ ಸದ್ಯಕ್ಕೆ ಶಾಲೆಗಳು ಆರಂಭವಾಗುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಡಾ. ದೇವಿ ಶೆಟ್ಟಿ ನೇತೃತ್ವದ ತಜ್ಞರ ಮಧ್ಯಂತರ ವರದಿ ಸಲ್ಲಿಸಿದ್ದು, 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಆರ್ಥಿಕ, ಮಾನವ ಸಂಪನ್ಮೂಲದ ಅಗತ್ಯವಿದೆ. ತಾಲೂಕು ಕೇಂದ್ರಗಳಲ್ಲಿ ಕೋವಿಡ್ ಕೇರ್ ಸೆಂಟರ್ ಐಸಿಯು ಮತ್ತು ವೆಂಟಿಲೇಟರ್ ಗಳ ಲಭ್ಯತೆ, ಮಕ್ಕಳಿಗೆ ಆಕ್ಸಿಜನ್ ಬೆಡ್, ಪೌಷ್ಟಿಕಾಹಾರ ದ ಕೊರತೆ ಆಗದ ಹಾಗೆ ನೋಡಿಕೊಳ್ಳುವುದು. ವೈದ್ಯರು, ದಾದಿಯರ ಅಗತ್ಯತೆ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ತಜ್ಞರು ಸಲಹೆ ನೀಡಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.
ಕಾಲೇಜುಗಳನ್ನು ವ್ಯಾಕ್ಸಿನೇಷನ್ ಮಾಡಿಸಿ ಆರಂಭಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ವ್ಯಾಕ್ಸಿನೇಷನ್ ಆದ ನಂತರವಷ್ಟೇ ಶಾಲಾ ಕಾಲೇಜುಗಳು ಆರಂಭಿಸಲಾಗುವುದು. ಮೊದಲು ಕಾಲೇಜು ಆರಂಭಿಸಲಾಗುವುದು, ಮೆಡಿಕಲ್, ಇಂಜಿನಿಯರಿಂಗ್ ಕಾಲೇಜು ತೆರೆಯುವ ಬಗ್ಗೆ ಚಿಂತನೆ ನಡೆಸಲಾಗುವುದು. ಪರಿಸ್ಥಿತಿ ನೋಡಿಕೊಂಡು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
Advertisement. Scroll to continue reading.