ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : “ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಆರೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 30 ಎಕರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದ್ದು, ಮಂಗಳವಾರ ಆರೂರು ರಂಜ ಬೈಲಿನಲ್ಲಿ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ , ಕೈಗಾರಿಕೋದ್ಯಮಿ ದಿನೇಶ್ ಭಟ್ ಬ್ರಹ್ಮಾವರ ಹಾಗೂ ಶಾಸಕ ಕೆ. ರಘುಪತಿ ಭಟ್ ಅವರು ಭೂ ಮಾತೆಗೆ ಹಾಲನ್ನು ಅರ್ಪಿಸಿ ನೇಜಿ ನೀಡುವ ಮೂಲಕ ಯಂತ್ರ ನಾಟಿ ಹಾಗೂ ಕೈ ನಾಟಿಗೆ ಚಾಲನೆ ನೀಡಿದರು. ಬಳಿಕ ಸ್ಥಳೀಯರೊಂದಿಗೆ ಸೇರಿ ನೇಜಿ ನಟ್ಟರು.
ಈ ಸಂದರ್ಭ ಜಗದೀಶ್ ಶೆಟ್ಟರ್ ಅವರು ಮಾತನಾಡಿ, ಶಾಸಕ ಕೆ. ರಘುಪತಿ ಭಟ್ ಅವರು ಕೇದಾರೋತ್ಥಾನ ಟ್ರಸ್ಟ್ ಮೂಲಕ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡುತ್ತಿರುವುದು ದೊಡ್ಡ ದಾಖಲೆ. ಅವರು ಸದಾ ಸಮಾಜಮುಖಿಯಾಗಿ ಯೋಚಿಸಿ ಟ್ರಸ್ಟನ್ನು ರಚಿಸಿ ಸ್ಥಳೀಯರನ್ನು ಒಳಗೂಡಿಸಿಕೊಂಡು ಭೂಮಿಯನ್ನು ಹಸಿರಾಗಿಸುತ್ತಿರುವುದು ಶ್ಲಾಘನೀಯ. ಇದಕ್ಕೆ ಸರಕಾರ ಸದಾ ನಿಮ್ಮೊಂದಿಗಿರುತ್ತದೆ ಎಂದರು.
Advertisement. Scroll to continue reading.
ಈ ಸಂದರ್ಭ ಆರೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಮತಾ ಶೆಟ್ಟಿ, ಉಪಾಧ್ಯಕ್ಷರಾದ ಗುರುರಾಜ್ ರಾವ್, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಕೇದಾರೋತ್ಥಾನ ಟ್ರಸ್ಟ್ ನ ಕೋಶಾಧಿಕಾರಿ ರಾಘವೇಂದ್ರ ಕಿಣಿ, ಸದಸ್ಯ ಪ್ರತಾಪ್ ಹೆಗ್ಡೆ ಮಾರಾಳಿ, ಬಿರ್ತಿ ರಾಜೇಶ್ ಶೆಟ್ಟಿ, ದಿನಕರ್ ಬಾಬು, ಸಚಿವರ ಧರ್ಮಪತ್ನಿ ಶಿಲ್ಪಾ ಶೆಟ್ಟರ್, ಶಾಸಕರ ಧರ್ಮಪತ್ನಿ ಶಿಲ್ಪಾ ರಘುಪತಿ ಭಟ್, ಮಗನಾದ ರೆಯ್ಯಾನ್ಶ್ ಮತ್ತು ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಕೆಂಪೇಗೌಡ, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಸಹಾಯಕ ಸಂಶೋಧನಾ ನಿರ್ದೇಶಕ ಡಾ. ಲಕ್ಷ್ಮಣ್, ಹಿರಿಯ ಕ್ಷೇತ್ರ ಅಧಿಕಾರಿ ಶಂಕರ್ ಹಾಗೂ ಸ್ಥಳೀಯ ಕೃಷಿಕರು, ಪ್ರಮುಖರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.