ವರದಿ : ಬಿ.ಎಸ್.ಆಚಾರ್ಯ
ಬಹ್ಮಾವರ : ಸೀತಾನದಿ ರಸ್ತೆಯ ಇಕ್ಕೆಲಗಳಲ್ಲಿರುವ ಮರಗಳನ್ನು ರಸ್ತೆ ಅಗಲೀಕರಣಗೊಳಿಸುವ ಸಂದರ್ಭದಲ್ಲಿ ತೆಗೆದಿರುವುದರಿಂದ ಮರದ ಪರಿಹಾರಾರ್ಥವಾಗಿ ಅರಣ್ಯ ಇಲಾಖೆ ವತಿಯಿಂದ 10,000 ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ನಾಳೆ ಚಾಲನೆ ನೀಡಲಿದ್ದಾರೆ. ಕೃಷಿ ಕೇಂದ್ರದ ಬಳಿ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಭರದ ಸಿದ್ಧತೆ ನಡೆದಿದೆ.
ಸಿದ್ಧತಾ ಕಾರ್ಯದಲ್ಲಿ ವಲಯ ಅರಣ್ಯ ಅಧಿಕಾರಿ ಸುಬ್ರಹ್ಮಣ್ಯ ಆಚಾರ್ಯ, ಬ್ರಹ್ಮಾವರ ಉಪ ವಲಯ ಅರಣ್ಯಾಧಿಕಾರಿ ಹರೀಶ್ ಇನ್ನಿತರ ಅರಣ್ಯ ಅಧಿಕಾರಿಗಳು ಹಾಜರಿದ್ದರು.
Advertisement. Scroll to continue reading.