ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಜೆಟ್ ಕಟ್ಟು ತಿರುವಿನಲ್ಲಿ ಬುಧವಾರ ಸಂಜೆ 3 ಕಾರುಗಳ ನಡುವೆ ಸರಣಿ ಅಪಘಾತ ನಡೆದಿದೆ. ಹೆಬ್ರಿಯಿಂದ ಸೋಮೇಶ್ವರ ಕಡೆಗೆ ಹೋಗುವ ಮಾರುತಿ ಬಲೆನೊ ಕಾರಿನ ಚಾಲಕ ಎದುರುಗಡೆ ಚಲಿಸುತ್ತಿದ್ದ ಮಾರುತಿ ಸಿಫ್ಟ್ ಕಾರೊಂದನ್ನು ಹಿಂದಿಕ್ಕುವ ಭರದಲ್ಲಿ ಎದುರುಗಡೆಯಿಂದ ಬರುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 3 ಕಾರುಗಳ ಮುಂಭಾಗ ನಜ್ಜುಗುಜ್ಜಾಗಿದೆ. ಸರಣಿ ಅಪಘಾತದಿಂದ ಸ್ವಲ್ಪ ಸಮಯ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿತ್ತು.
ಹೆಬ್ರಿ ಠಾಣಾಧಿಕಾರಿ ಮಹೇಶ್ ಟಿ.ಎಮ್ ಹಾಗೂ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ರಸ್ತೆಯಲ್ಲಿದ್ದ ಕಾರುಗಳನ್ನು ಸ್ಥಳೀಯರ ಸಹಾಯದಿಂದ ಬದಿಗೆ ಸರಿಸಿ, ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಡಿಕ್ಕಿ ಹೊಡೆದ ಬಲೆನೊ ಕಾರಿನ ಚಾಲಕನ ತಲೆಗೆ ಸ್ವಲ್ಪ ಗಂಭೀರ ಸ್ವರೂಪದ ಗಾಯವಾಗಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 3 ಕಾರ್ ನಲ್ಲಿದ್ದ ಸಹ ಪ್ರಯಾಣಿಕರು ಬದಲಿ ವಾಹನಗಳಲ್ಲಿ ತೆರಳಿದರು. ಹೆಬ್ರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Advertisement. Scroll to continue reading.