ಶಿವಮೊಗ್ಗ : ಜುಲೈ 26 ರಿಂದ ಕುವೆಂಪು ವಿಶ್ವವಿದ್ಯಾಲಯದ ಪದವಿ, ಸ್ನಾತಕೋತ್ತರ ಪದವಿ, ಮತ್ತು ಬಿ.ಎಡ್ ಆಫ್ಲೈನ್ ತರಗತಿಗಳು ಪುನರಾರಂಭಗೊಳ್ಳಲಿದೆ. ಕಾಲೇಜ್ ವಿದ್ಯಾರ್ಥಿಗಳು ಕನಿಷ್ಠ ಮೊದಲ ಡೋಸ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದಿರಬೇಕು ಸೂಚನೆ ಹೊರಡಿಸಿದೆ.
ಈ ಕುರಿತು ಕುಲಸಚಿವರು ಸುತ್ತೋಲೆ ಹೊರಡಿಸಿದ್ದು, ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಮತ್ತು ಕರ್ನಾಟಕ ಸರ್ಕಾರದ ನಿರ್ದೇಶನದಂತೆ ಜುಲೈ 26ರಿಂದ ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಭೌತಿಕ ತರಗತಿಗಳು ಪುನರಾರಂಭಗೊಳ್ಳಲಿದೆ. ವಿದ್ಯಾರ್ಥಿಗಳು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಮತ್ತು ಸ್ಯಾನಿಟೈಸರ್ ಬಳಸಿ ಶುಚಿತ್ವ ಕಾಪಾಡಿಕೊಳ್ಳಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
Advertisement. Scroll to continue reading.