ಧಾರಾಕಾರ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ, ರಸ್ತೆಗೆ ಮರಗಳು ಉರುಳುತ್ತಿರುವ ಸಾಧ್ಯತೆ ಹಿನ್ನಲೆಯಲ್ಲಿ ಸಂಜೆ 7 ಗಂಟೆಯಿಂದ ಬೆಳಗಿನ ಜಾವ 6 ಗಂಟೆಯವರೆಗೆ ಚಾರ್ಮಾಡಿ ಘಾಟ್ ನ ಮೂಲಕ ತೆರಳುವ ವಾಹನಗಳಿಗೆ ಸಂಚಾರ ನಿಷೇಧಿಸಲಾಗಿದೆ. ಭಾರೀ ಮಳೆ ಕಾರಣದಿಂದ ವಾಹನ ಸಂಚಾರ ಬಂದ್ ಮಾಡಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎಂ ರಮೇಶ್ ಆದೇಶ ಹೊರಡಿಸಿದ್ದಾರೆ.
ಹೆದ್ದಾರಿ ಕುಸಿದ ಹಿನ್ನೆಲೆ ಶಿರಾಡಿ ಘಾಟ್ ಬಂದ್ ಮಾಡಲಾಗಿತ್ತು. ಇದೀಗ ದುರಸ್ತಿ ಕಾರ್ಯ ಮುಗಿದಿದ್ದು, ಜು. 23 ರಿಂದ ಮುಂದಿನ ಆದೇಶದ ವರೆಗೆ ಬೃಹತ್ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದ್ದು. ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಬೆಳಿಗ್ಗೆ 6 ಗಂಟೆಯಿಂದ 6 ಗಂಟೆಯವರೆಗೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
Advertisement. Scroll to continue reading.