ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದ ನೂತನ ಸಚಿವರು ಇಂದು ರಾಜ ಭವನದ ಗಾಜಿನ ಮನೆಯಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. 29 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಈ ಬಾರಿ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಅವರು ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 4 ಬಾರಿ ಶಾಸಕರಾಗಿ ಸ್ವಕ್ಷೇತ್ರದಲ್ಲಿ ಅವರ ಕಾರ್ಯ ವೈಖರಿ ಬಗ್ಗೆ ಉತ್ತಮ ಮಾತು ಕೇಳಿ ಬಂದಿವೆ. ಇದೀಗ ಸಚಿವರಾಗಿರುವುದು ಸಹಜವಾಗಿಯೇ ಕಾರ್ಕಳ ಕ್ಷೇತ್ರದ ಅವರ ಅಭಿಮಾನಿಗಳಿಗೆ ಸಂತಸ ತಂದಿದೆ.
ಉಡುಪಿ ಜಿಲ್ಲೆಗೆ ಎರಡು ಸಚಿವ ಸ್ಥಾನ ಸಿಕ್ಕಿದ್ದು ಕೋಟ ಶ್ರೀನಿವಾಸ ಪೂಜಾರಿ ಅವರು ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದ.ಕ ಜಿಲ್ಲೆಗೆ ಒಂದು ಸಚಿವ ಸ್ಥಾನ ದೊರೆತ್ತಿದ್ದು ಸುಳ್ಯ ಶಾಸಕ ಎಸ್.ಅಂಗಾರ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರ ಪಟ್ಟಿ:
- ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ
- ಆರ್.ಅಶೋಕ್- ಪದ್ಮನಾಭ ನಗರ
- ಬಿ.ಸಿ ಪಾಟೀಲ್ – ಹಿರೇಕೇರೂರು
- ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರಂ
- ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು
- ಉಮೇಶ್ ಕತ್ತಿ- ಹುಕ್ಕೇರಿ
- ಎಸ್.ಟಿ.ಸೋಮಶೇಖರ್- ಯಶವಂತಪುರ
- ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ
- ಬೈರತಿ ಬಸವರಾಜ – ಕೆ ಆರ್ ಪುರಂ
- ಮುರುಗೇಶ್ ನಿರಾಣಿ – ಬಿಳಿಗಿ
- ಶಿವರಾಂ ಹೆಬ್ಬಾರ್- ಯಲ್ಲಾಪುರ
- ಶಶಿಕಲಾ ಜೊಲ್ಲೆ- ನಿಪ್ಪಾಣಿ
- ಕೆಸಿ ನಾರಾಯಣ್ ಗೌಡ – ಕೆಆರ್ ಪೇಟೆ
- ಸುನೀಲ್ ಕುಮಾರ್ – ಕಾರ್ಕಳ
- ಅರಗ ಜ್ಞಾನೇಂದ್ರ – ತೀರ್ಥ ಹಳ್ಳಿ
- ಗೋವಿಂದ ಕಾರಜೋಳ-ಮುಧೋಳ
- ಮುನಿರತ್ನ- ಆರ್ ಆರ್ ನಗರ, ಬೆಂಗಳೂರು
- ಎಂ.ಟಿ.ಬಿ ನಾಗರಾಜ್ – ಎಂ ಎಲ್ ಸಿ
- ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್, ಬೆಂಗಳೂರು
- ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ
- ಹಾಲಪ್ಪ ಆಚಾರ್ – ಯಲ್ಬುರ್ಗ
- ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ
- ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ
- ಪ್ರಭು ಚೌವ್ಹಾಣ್ – ಔರಾದ್
- ವಿ ಸೋಮಣ್ಣ – ಗೋವಿಂದ್ ರಾಜನಗರ, ಬೆಂಗಳೂರು
- ಎಸ್ ಅಂಗಾರ – ಸುಳ್ಯ
- ಆನಂದ್ ಸಿಂಗ್ – ಹೊಸಪೇಟೆ
- ಸಿ ಸಿ ಪಾಟೀಲ್ – ನರಗುಂದ
- ಬಿ.ಸಿ.ನಾಗೇಶ್ – ತಿಪಟೂರು
Advertisement. Scroll to continue reading.
In this article:Diksoochi news, diksoochi Tv, diksoochi udupi, Kota Shreenivas Poojary, s Angara, sunil kumar
Click to comment