ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಲಿದೆ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಸೋಂಕು ಇಳಿಮುಖ ಕಂಡಿಲ್ಲ. ದಿನದಿಂದ ದಿನೇ ಹೆಚ್ಚುತ್ತಲಿದೆ.
ಇದರ ಪರಿಣಾಮ ಪವಿತ್ರ ಪುಣ್ಯಕ್ಷೇತ್ರಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ಎಲ್ಲ ಎಲ್ಲ ಸೇವೆಗಳು ಸ್ಥಗಿತ ಗೊಳಿಸಬೇಕು ಎಂದು ಜಿಲ್ಲಾ ಆಡಳಿತ ಸೂಚಿಸಿದೆ. ಜೊತೆಗೆ ಕಟೀಲು ಶ್ರೀದುರ್ಗಾಪರಮೇಶ್ವರಿ ದೇಗುಲಕ್ಕೂ ಈ ಅನ್ವಯವಾಗಲಿದೆ.
ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ. ವಿ. ರಾಜೇಂದ್ರ ಆದೇಶ ಹೊರಡಿಸಿದ್ದು ರಾಜ್ಯದ ಬೇರೆ ಬೇರೆ ಕಡೆಯಿಂದ ಭಕ್ತರು ಹೆಚ್ಚಿನ ಸಂಖ್ಯೆ ಬರುತ್ತಿದ್ದು ಸೋಂಕು ಹರಡುವ ಭೀತಿ ಇದೆ ಈ ಕಾರಣದಿಂದಾಗಿ ಎಲ್ಲ ಸೇವೆಯನ್ನು ಸದ್ಯದ ಮಟ್ಟಿಗೆ ಸ್ಥಗಿತಗೊಳಿಸಬೇಕು ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿ.
ಮಾರ್ಗಸೂಚಿ :
Advertisement. Scroll to continue reading.
- ದಿನಾಂಕ 05-08-2021 ರಿಂದ ದಿನಾಂಕ 15-08-2021ರವರೆಗೆ ದುರ್ಗಾಪರಮೇಶ್ವರಿ ದೇವಸ್ಥಾನ, ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಗಳಿಗೆ ಭಕ್ತರಿಗೆ ಬೆಳಿಗ್ಗೆ 7 ರಿಂದ ಸಂಜೆ 7ರವರೆಗೆ ಅವಕಾಶ
- ಭಕ್ತಾದಿಗಳು ಕಡ್ಡಾಯವಾಗಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಭಕ್ತಾದಿಗಳಿಗೆ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ತೀರ್ಥ, ಪ್ರಸಾದ, ಸೇವೆಗಳು, ಅನ್ನ ಸಂತರ್ಪಣೆಗೆ ಅವಕಾಶವಿಲ್ಲ.
- ವಾರಾಂತ್ಯದಲ್ಲಿ ( ಶನಿವಾರ ಮತ್ತು ಭಾನುವಾರ ) ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ವಸತಿ ಗೃಹಗಳಲ್ಲಿ ತಂಗುವುದಾಗಲೀ, ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ.
- ಶನಿವಾರ ಮತ್ತು ಭಾನುವಾರಗಳಂದು ಎಲ್ಲಾ ರೀತಿಯ ಉತ್ಸವ, ಸೇವೆಗಳು, ತೀರ್ಥ, ಪ್ರಸಾದ, ಮುಡಿ ಸೇವೆಗಳನ್ನು ನಿರ್ಬಂಧಿಸಲಾಗಿದೆ. ಅರ್ಚಕರ ಸಾಂಪ್ರದಾಯಿಕ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
- ವಾರಾಂತ್ಯ ಹೊರತುಪಡಿಸಿ, ಉಳಿದ ದಿನಗಳಲ್ಲಿ ವಸತಿ ಗೃಹಗಳಲ್ಲಿ ತಂಗಲು ಬಯಸುವವರು 72 ಗಂಟೆಯೊಳಗೆ ಆರ್ ಟಿ-ಪಿಸಿಆರ್ ಟೆಸ್ಟ್ ಮಾಡಿಸಿ, ನೆಗೆಟಿವ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರತಕ್ಕದ್ದು.
- ಎಲ್ಲಾ ಕೊಠಡಿಗಳನ್ನು ವಾಸ್ತವ್ಯಕ್ಕೆ ಮುಂಚೆ ಸ್ಯಾನಿಟೈಸ್ ಮಾಡಬೇಕು.
In this article:dakshina kannada, Dharmasthala, Diksoochi news, diksoochi Tv, diksoochi udupi, kateel
Click to comment