ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಇಂದು ನವದೆಹಲಿಯ ಸಂಸದ್ ಮಾರ್ಗದಲ್ಲಿ ನೂತನ ಸಂಸತ್ ಭವನದ ನಿರ್ಮಾಣಕ್ಕೆ ಭೂಮಿ ಪೂಜೆ, ಶಂಕುಸ್ಥಾಪನೆ ನೇರವೇರಿಸಿದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ತ್ರಿಕೋನಾಕಾರದಲ್ಲಿ ನಿರ್ಮಾಣಗೊಳ್ಳಲಿರುವ ಕಟ್ಟಡವು 2022ರಲ್ಲಿ ಪೂರ್ಣಗೊಳ್ಳಲಿದೆ. 2022ಕ್ಕೆ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳಾಗಲಿದ್ದು, ಇದು ಜನತೆಗೆ ಕೊಡುಗೆ ಎಂದರು.
ನಾಡಿನ ವಿವಿಧೆಡೆಗಳಿಂದ ಬಂದಿದ್ದ ಧಾರ್ಮಿಕ ಮುಖಂಡರು, ಪುರೋಹಿತರು ಸರ್ವಧರ್ಮ ಪ್ರಾರ್ಥನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ವೆಂಕಟೇಶ್ ಜೋಶಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಕೇಂದ್ತ ಸಂಪುಟ ಸಚಿವರು, ಸಂಸದರು ಮೊದಲಾದವರು ಭಾಗವಹಿಸಿದ್ದರು. ಸಿಎಂ ಯಡಿಯೂರಪ್ಪ ಸೇರಿದಂತೆ ಹಲವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.