Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಬಿಜೆಪಿಯ ಇಚ್ಛಾಶಕ್ತಿ ವಿರೋಧಿಸುವವರಿಗೂ ಗೊತ್ತಾಗಿದೆ; ಜಿಲ್ಲೆಯಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ : ಸಚಿವ ಕೋಟ

0

ಉಡುಪಿ : ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಎಂತಹ ಕೆಲಸಗಳನ್ನು ಮಾಡುತ್ತಾರೆ ಎಂಬುದು ಇಡೀ ಜಗತ್ತಿಗೆ ಗೊತ್ತಾಗಿದೆ. ಎಂತಹ ಇಚ್ಛಾ ಶಕ್ತಿ ಇದೆ ಎನ್ನುವುದು ಬಿಜೆಪಿಯನ್ನು ವಿರೋಧಿಸುವವರಿಗೂ ಗೊತ್ತಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಅಂಬಾಗಿಲು ಅಮೃತ್ ಗಾರ್ಡನ್ ನಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದು ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರದ ಸೂತ್ರ ಹಿಡಿಯುತ್ತಲೇ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಂದೇ ಬಿಟ್ಟಿದ್ದರು. ರಾಮ ಜನ್ಮ ಭೂಮಿ ಸ್ಥಾಪನೆ ಮಾಡಿದರೆ ರಕ್ತದ ಓಕುಳಿ ಹರಿಯುತ್ತದೆ ಎಂದು ರಾಜಕೀಯ ಪಕ್ಷಗಳು ನಮಗೆ ಸವಾಲನ್ನು ಒಡ್ಡಿದ್ದವು. ಅಡ್ವಾಣಿ ಅವರ ರಥಯಾತ್ರೆಯಿಂದ ಇಲ್ಲಿಯ ವರೆಗೆ ರಕ್ತದೋಕುಳಿ ಹರಿಯುತ್ತದೆ ಎಂದವರಲ್ಲಿ ಸಿದ್ಧರಾಮಯ್ಯನವರೂ ಸೇರಿದ್ದರು. ಆದರೆ ಇಂದು ಬದಲಾದ ಕಾಲಘಟ್ಟದಲ್ಲಿ ನರೇಂದ್ರ ಮೋದಿ ಅವರ ಆಡಳಿತ ಶೈಲಿಯಿಂದಾಗಿ ಸುಪ್ರೀಂ ಕೋರ್ಟ್ ತೀರ್ಪು ಕೊಡುವ ವೇಳೆ, ನಾವು ಸುಪ್ರೀಂ ಕೋರ್ಟ್ ತೀರ್ಪಿಗೆ ಬದ್ಧರಿದ್ದೇವೆ ಎಂದು ಸಿದ್ಧರಾಮಯ್ಯ ಅವರು ಹೇಳಿದರು. ಹೀಗೆ ಒಪ್ಪಿಕೊಳ್ಳುವ ಹಾಗೆ ಆಗಿದೆ. ಇಂತಹ ಒಂದು ವ್ಯವಸ್ಥೆ ನಡುವೆ ಸರ್ಕಾರ ಕೆಲಸ ಮಾಡುತ್ತಿದೆ. ತ್ರಿವಳಿ ತಲಾಕ್ ನಂತಹ ಹಲವು ಇತಿಹಾಸವನ್ನು ಬದಲು ಮಾಡಿದ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿರುವ ಕೀರ್ತಿ ನಮ್ಮ ಸರ್ಕಾರಕ್ಕೆ ಇದೆ. ಮುಂದಿನ ದಿನಗಳಲ್ಲಿ ಒಟ್ಟಾಗಿ, ಒಂದಾಗಿ ಕೆಲಸ ಮಾಡುತ್ತೇವೆ ಎಂದರು.

Advertisement. Scroll to continue reading.

ಮೊದಲ ಬಾರಿಗೆ ಸಚಿವರಾಗಿ ಆಯ್ಕೆಯಾಗಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಚಿವ ವಿ. ಸುನಿಲ್ ಕುಮಾರ್, ಶಾಸಕನಾಗಿ ಕೆಲಸ ಮಾಡುತ್ತಿದ್ದ ನನಗೆ ಈ ಬಾರಿ ಸಚಿವ ಸಂಪುಟದಲ್ಲಿ ಕೆಲಸ ಮಾಡುವ ಒಳ್ಳೆಯ ಅವಕಾಶವನ್ನು ಪಕ್ಷ ಮಾಡಿಕೊಟ್ಟಿದೆ. ಈ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡು ಉಡುಪಿ ಜಿಲ್ಲೆಯ ಅಭಿವೃದ್ಧಿ ಹಾಗೂ ಕಾರ್ಯಕರ್ತರ ಹಿತವನ್ನು ಕಾಪಾಡುವ ಬದ್ಧತೆಯೊಂದಿಗೆ ಕೆಲಸ ಮಾಡುತ್ತೇನೆ. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಸಂಘಟನೆಯ ಬೇರೆ ಬೇರೆ ಜವಾಬ್ದಾರಿಗಳಲ್ಲಿ ಕೆಲಸ ಮಾಡುತ್ತಿದ್ದವನನ್ನು ಪಕ್ಷ ಇಂದು ಶಾಸಕನಾಗಿ ಮಾಡಿತು. ಕಾರ್ಕಳದ ಜನ ಮೂರು ಬಾರಿ ಶಾಸಕನಾಗಿ ಆಯ್ಕೆ ಮಾಡಿದರು. ಇದನ್ನು ಪಕ್ಷ ಗಮನಿಸಿ ಸಚಿವ ಸ್ಥಾನ ಕೊಟ್ಟಿದೆ. ಜಿಲ್ಲೆಯ ಅಭಿವೃದ್ಧಿಗೆ ಎಲ್ಲ ಶಾಸಕರು, ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ರಾಜ್ಯ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ. ಸುವರ್ಣ, ಕಾರ್ಯಕಾರಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ಬಿ.ಎನ್ ಶಂಕರ್ ಪೂಜಾರಿ, ಗೀತಾಂಜಲಿ ಸುವರ್ಣ ಹಾಗೂ ವಿವಿಧ ಮೋರ್ಚಾದ ಪದಾಧಿಕಾರಿಗಳು, ವಿವಿಧ ಮಂಡಲದ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!