ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ನೀಡಿರುವ ಸಂಪುಟ ದರ್ಜೆ ಸ್ಥಾನಮಾನವನ್ನು ಯಡಿಯೂರಪ್ಪ ಅವರು ತಿರಸ್ಕರಿಸಿದ್ದಾರೆ.
ಭಾನುವಾರ ತಮಗೆ ನೀಡಿರುವ ಸಂಪುಟ ದರ್ಜೆ ಸ್ಥಾನಮಾನ ಹಿಂಪಡೆಯಬೇಕು ಎಂದು ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರವನ್ನು ಸಹ ಬರೆದಿದ್ದಾರೆ. ಬಸವರಾಜ ಬೊಮ್ಮಾಯಿ ಭಾನುವಾರ ಯಡಿಯೂರಪ್ಪರನ್ನು ಭೇಟಿ ಮಾಡಿದ್ದರು.
ಮಾಜಿ ಮುಖ್ಯಮಂತ್ರಿಗಳಿಗೆ ನೀಡಲಾಗುವ ಸರ್ಕಾರಿ ಸೌಲಭ್ಯಗಳನ್ನು ಮಾತ್ರ ತಮಗೆ ನೀಡಿ. ಸಂಪುಟ ದರ್ಜೆಯ ಸ್ಥಾನಮಾನವನ್ನು ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಕೋರುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
Advertisement. Scroll to continue reading.