ಬೆಂಗಳೂರು : ಪರಿಶಿಷ್ಟ ಜಾತಿಯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ನೀಡಲಾಗುತ್ತಿದ್ದ ನೆರವನ್ನು ರಾಜ್ಯ ಸರ್ಕಾರವು 1.70 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸಿದೆ. ಈ ಬಗ್ಗೆ ಮಾಹಿತಿ ನೀಡಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು, ಈಗ ಪರಿಶಿಷ್ಟ ಜಾತಿಯ ಬಡ ಕುಟುಂಬದವರಿಗೆ ಮನೆ ಕಟ್ಟಲು ನೀಡಲಾಗುತ್ತಿರುವಂತ ನೆರವು 1.70 ಲಕ್ಷ ಯಾವುದಕ್ಕೂ ಸಾಧ್ಯವಾಗುತ್ತಿಲ್ಲ. ಹೀಗಾಗಿ ಈ ನೆರವನ್ನು 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದರು.
ಪರಿಶಿಷ್ಟ ಜಾತಿಯ ಬಡ ಕುಟುಂಬಗಳಿಗೆ ಮನೆ ಕಟ್ಟಿಕೊಳ್ಳಲು ನೆರವು 5 ಲಕ್ಷಕ್ಕೆ ಹೆಚ್ಚಿಸುವಂತಹ ಪ್ರಸ್ತಾವನೆಗೆ ಅನುಮತಿ ಕೋರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಶೀಘ್ರದಲ್ಲೇ ಪ್ರಸ್ತಾವನೆ ಸಲ್ಲಿಸಲಾಗುತ್ತದೆ. ಆ ಬಳಿಕ, ಮನೆ ಹೆಚ್ಚಳದ ನೆರವಿನ ಆದೇಶವನ್ನು ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಕೊರೋನಾ ಲಾಕ್ ಡೌನ್ ನಂತರದ ಆರ್ಥಿಕ ಸಂಕಷ್ಟವನ್ನು ಸರಿದೂಗಿಸಲು, ರಾಜ್ಯ ಸರ್ಕಾರವು ಒಂದು ವರ್ಷಗಳ ಕಾಲ ಇಲಾಖೆಯಲ್ಲಿ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಲಾಗುತ್ತದೆ. ಅನಿವಾರ್ಯವಲ್ಲದ ಯೋಜನೆಗಳನ್ನು ತಡೆ ಹಿಡಿಯಲಾಗುವುದು ಎಂದರು.