ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಆಕಸ್ಮಿಕ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತಪಟ್ಟ ಘಟನೆ ಮುದ್ರಾಡಿ ಗ್ರಾಮದ ಕಬ್ಬಿನಾಲೆಯಲ್ಲಿ ನಡೆದಿದೆ. ಮಜ್ಜಿಗುಡ್ಡ ನಿವಾಸಿ ಪೇರಳ ಮನೆ 54 ವರ್ಷ ಪ್ರಾಯದ ಲಕ್ಷ್ಮೀಶ್ ಹೆಬ್ಬಾರ್ ಮೃತಪಟ್ಟವರು.
ಲಕ್ಷ್ಮೀಶ ಅವರು ತಮ್ಮ ಅಡಿಕೆ ತೋಟದಲ್ಲಿ ಅಡಿಕೆಗೆ ಔಷಧಿ ಸಿಂಪಡಣೆ ಮಾಡುವ ಸಂದರ್ಭ ಅಲ್ಯೂಮಿನಿಯಂ ಏಣಿಗೆ ತೋಟದ ಮೇಲೆ ಹಾದು ಹೋದ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಹೆಬ್ರಿ ಹಾಗೂ ಉಡುಪಿ ಮೆಸ್ಕಾಂ ಅಧಿಕಾರಿಗಳು ಮತ್ತು ಹೆಬ್ರಿ ಪೊಲೀಸ್ ಠಾಣಾಧಿಕಾರಿ ಮಹೇಶ್ T.M ಭೇಟಿ ನೀಡಿ ಪರಿಶೀಲಿಸಿದರು. ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
Advertisement. Scroll to continue reading.