ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಹಲವಾರು ವರ್ಷಗಳ ಇತಿಹಾಸ ಹೊಂದಿರುವ ಶಾಲೆಯಾಗಿದ್ದು, ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ವರ್ಷವೂ ಕಳೆದ ಬಾರಿಗಿಂತ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುವ ಲಕ್ಷಣ ಕಂಡು ಬರುತ್ತಿದೆ ಎಂದು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ.ಜಿ.ರಾಮಕೃಷ್ಣ ತಿಳಿಸಿದ್ದಾರೆ.

1,300ಕ್ಕೂ ಹೆಚ್ಚು ಅರ್ಜಿಗಳನ್ನು ಪ್ರಥಮ ಪಿಯುಸಿಗೆ ವಿತರಣೆ ಮಾಡಲಾಗಿದೆ. ಇನ್ನೂ ಅನೇಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಆಗಮಿಸುತ್ತಿದ್ದಾರೆ. ಬಡ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡುವ ಪ್ರಯತ್ನ ನಾವು ಮಾಡುತ್ತಿದ್ದೇವೆ. 22 ಸೆಕ್ಷನ್ ಗಳನ್ನು ನಾವು ಮಾಡಿದ್ದು, ಆ 22 ಸೆಕ್ಷನ್ ಗಳು ಚೆನ್ನಾಗಿ ನಡೆಯುತ್ತಿವೆ. ಈ ವರ್ಷ ಹೆಚ್ಚು ಸೆಕ್ಷನ್ ಆರಂಭಿಸುವ ಪ್ರಯತ್ನ ನಾವು ಮಾಡುತ್ತಿದ್ದೇವೆ. ಕಂಪ್ಯೂಟರ್ ಸೈನ್ಸ್ ವಿಭಾಗ, ಸ್ಟ್ಯಾಸ್ಟಿಸ್ಟಿಕ್ಸ್ ನ ಒಂದು ವಿಭಾಗವನ್ನು ನಾವು ಮಾಡುತ್ತಿದ್ದೇವೆ. ಕಲಾ ವಿಭಾಗದಲ್ಲಿ 1 ವಿಭಾಗ, ವಾಣಿಜ್ಯ ವಿಭಾಗದಲ್ಲಿ 6 ವಿಭಾಗ, ವಿಜ್ಞಾನ ವಿಭಾಗದಲ್ಲಿ ಮೂರು ವಿಭಾಗಗಳಿದ್ದು, ಹೆಚ್ಚು ವಿಭಾಗಗಳನ್ನು ಕರಿಯುವ ಅವಕಾಶ ನಮ್ಮ ಸಂಸ್ಥೆಗಿದೆ. ಆದ್ದರಿಂದ ಈ ಅವಕಾಶವನ್ನು ಬಡ ವಿದ್ಯಾರ್ಥಿಗಳಿಗೆ ಮಾಡಿಕೊಡಲು ನಮಗೆ ಹೆಮ್ಮೆ ಎನಿಸುತ್ತಿದೆ. ಆದ್ದರಿಂದ ಬರುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಅವಕಾಶವನ್ನು ಮಾಡಿಕೊಡಲಾಗುತ್ತದೆ ಎಂದರು.


