Connect with us

Hi, what are you looking for?

Diksoochi News

ರಾಜ್ಯ

ದಿನಕ್ಕೊಂದು ಕನ್ನಡ ಪತ್ರಿಕೆ ತಿಂಗಳಿಗೊಂದು ಕನ್ನಡ ಪುಸ್ತಕ ಓದುವ ಪರಿಪಾಠ ರೂಢಿಸಿಕೊಳ್ಳಿ- ಸಚಿವ ಸುನಿಲ್ ಕುಮಾರ್

0


ಬೆಂಗಳೂರು : ಪ್ರತಿದಿನ ಕನ್ನಡ ಪತ್ರಿಕೆಯೊಂದನ್ನು ಓದುವ ಹಾಗೂ ತಿಂಗಳಿಗೊಂದು ಕನ್ನಡ ಪುಸ್ತಕ ಕೊಂಡು ಓದುವ ಹಾಗೆಯೇ ಎರಡು ತಿಂಗಳಿಗೊಂದು ಕನ್ನಡ ಚಲನಚಿತ್ರ ನೋಡುವ ಅಭ್ಯಾಸ ಮಾಡಿಕೊಂಡರೆ ಆ ಮೂಲಕವೇ ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳೆಸುವಲ್ಲಿ ಜನರು ಸಹ ಪಾಲ್ಗೊಳ್ಳಲು ಸಾಧ್ಯವಾಗುತ್ತದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.
ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಭಾರತಾಂಬೆ ಹಾಗೂ ಕನ್ನಡಾಂಬೆಯ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಇಲಾಖೆ ಸಚಿವರಾಗಿ ಕಾರ್ಯಾರಂಭ ಮಾಡಿದರು. ಪವರ್ ಇಲಾಖೆಯಲ್ಲಿ ಸಂಸ್ಕೃತಿ ತರುವ, ಸಂಸ್ಕೃತಿ ಇಲಾಖೆಗೆ ಪವರ್ ತುಂಬುವ ಕೆಲಸ ಮಾಡಬೇಕಿದೆ. ಅದನ್ನು ಅತ್ಯಂತ ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಅವರು ಹೇಳಿದರು.


ಎರಡು ಇಲಾಖೆಗಳ ಆಡಳಿತ ಸುಧಾರಣೆಗೆ ಮತ್ತು ಕಾರ್ಯಕ್ರಮಗಳ ಸಮರ್ಥ ಅನುಷ್ಠಾನಕ್ಕೆ ಬೇಕಾಗುವ ಎಲ್ಲಾ ಕ್ರಮಗಳನ್ನು ನಿರ್ದಾಕ್ಷಿಣ್ಯವಾಗಿ ಕೈಗೊಳ್ಳುತ್ತೇನೆ ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ 2019-20 ನೇ ಸಾಲಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾನಪದಶ್ರೀ ಪ್ರಶಸ್ತಿ ಪುರಸ್ಕೃತೆ ಶ್ರೀಮತಿ ಭೀಮವ್ವ ದೊಡ್ಡ ಬಾಳವ್ವ ಶಿಳ್ಳೆಕ್ಯಾತರ, ಹುಟ್ಟು ಬಿ.ವಿ ಕಾರಂತ ಪ್ರಶಸ್ತಿಗೆ ಆಯ್ಕೆ, ಹೆಚ್.ವಿ.ವೆಂಕಟಸುಬ್ಬಯ್ಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ನಂತರ ಕಲಾಕ್ಷೇತ್ರದ ಆವರಣದಲ್ಲಿ ಇರುವ ಕನ್ನಡ ಪುಸ್ತಕ ಪ್ರಾಧಿಕಾರದ ಸಿರಿಗನ್ನಡ ಮಾರಾಟ ಮಳಿಗೆಗೆ ಭೇಟಿ ಕೊಟ್ಟು ಕನಕಾವಲೋಕನ ಪುಸ್ತಕ ಹಾಗೂ ಡಿ.ವಿ.ಜಿ ಅವರ ನೆನಪಿನ ಚಿತ್ರಗಳು ಮತ್ತು ಶಿವರಾಮ ಕಾರಂತರ ನಾಟಕಗಳು ಎಂಬ ಮೂರು ಪುಸ್ತಕಗಳನ್ನು ದುಡ್ಡುಕೊಟ್ಟು ಖರೀದಿ ಮಾಡಿದರು. ಅದರ ಮುಂಭಾಗದಲ್ಲಿಯೇ ಇದ್ದ ಕ್ಯಾಂಟೀನ್‍ನಲ್ಲಿ ಸಾಹಿತಿ ಮತ್ತು ಕಲಾವಿದರ ಜೊತೆ ಕಾಫಿ ಸೇವನೆ ಮಾಡಿದರು.


ರವೀಂದ್ರ ಕಲಾಕ್ಷೇತ್ರದ ಮೆಟ್ಟಿಲುಗಳಿಗೆ ನಮಸ್ಕರಿಸಿ ಅಡಿಯಿಟ್ಟ ಸಚಿವ ಸುನಿಲ್ ಕುಮಾರ್ ಇಡೀ ಕಾರ್ಯಕ್ರಮದಲ್ಲಿ ಲವಲವಿಕೆಯಿಂದ ಸಾಂಸ್ಕೃತಿಕ ವಾತಾವರಣಕ್ಕೆ ಮೆರುಗು ಕೊಟ್ಟರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ, ಸೋಮಶೇಖರ್, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾಕ್ಟರ್ ಎಂ.ಎನ್.ನಂದೀಶ್ ಹಂಚೆ, ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ವಸಂತಕುಮಾರ್ ಬಿ.ವಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷ ಆನೂರು ಅನಂತ ಕೃಷ್ಣಶರ್ಮ, ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಮಹಿಂದ್ರ, ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧ, ಕಲಾವಿದೆ ಮಾಳವಿಕಾ ಅವಿನಾಶ್, ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ, ಕನಕ ಅಧ್ಯಯನ ಪೀಠದ ಸುಮ್ಮನೆ ಸಮನ್ವಯಾಧಿಕಾರಿ ಎಂ.ಆರ್. ಸತ್ಯನಾರಾಯಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಜಿ. ರವಿಶಂಕರ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎಸ್. ರಂಗಪ್ಪ ಈ ಸಂದರ್ಭದಲ್ಲಿ ಹಾಜರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಸಿನಿಮಾ

0 ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ವಿಧಿವಶರಾಗಿದ್ದಾರೆ.  ಅವರಿಗೆ 81 ವರ್ಷ ವಯಸ್ಸಾಗಿತ್ತು. ದ್ವಾರಕೀಶ್ ಅವರಿಗೆ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಬೆಳಗಿನ ಜಾವ ಹೃದಯಾಘಾತದಿಂದ ಅವರು...

ರಾಷ್ಟ್ರೀಯ

0 ಅಯೋಧ್ಯೆ :  ಈ ಬಾರಿಯ ರಾಮನವಮಿ ಬಹಳ ವಿಶೇಷ. ಯಾಕೆಂದರೆ, ಇದೇ ಮೊದಲ ಬಾರಿಗೆ ಬಾಲರಾಮನ ಮೂರ್ತಿಯ ಹಣೆಯ ಮೇಲೆ ಸೂರ್ಯ ತಿಲಕವನ್ನು ಇಡಲಾಗುತ್ತದೆ. ಹಾಗಾಗಿ ಇಡೀ ಅಯೋಧ್ಯೆ ರಾಮನವಮಿ ಸಂಭ್ರಮ...

error: Content is protected !!