Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಬೆಳಕು ಚಾರಿಟೇಬಲ್ ಟ್ರಸ್ಟ್ ಮಣಿಪಾಲ ವತಿಯಿಂದ ವಿದ್ಯಾರ್ಥಿಯ ಶೈಕ್ಷಣಿಕ ವರ್ಷದ ಸಂಪೂರ್ಣ ಶುಲ್ಕ ವಿತರಣೆ

0

ಉಡುಪಿ : ಬೆಳಕು ಚಾರಿಟೇಬಲ್ ಟ್ರಸ್ಟ್ ಮಣಿಪಾಲ ವತಿಯಿಂದ ಮೂರನೇ ತರಗತಿ ವಿದ್ಯಾರ್ಥಿಯೊಬ್ಬನ ಪ್ರಸಕ್ತ ವರ್ಷದ ಸಂಪೂರ್ಣ ಶಾಲಾ ಶುಲ್ಕವನ್ನು ಭರಿಸಿದೆ. ಕೊಕ್ಕರ್ಣೆ ದುರ್ಗಾ ಆಂಗ್ಲ ಮಾಧ್ಯಮ ಶಾಲೆಯ ಮೂರನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ಓಂಕಾರ್ ಪ್ರಭುವಿನ 2021-22ನೇ ಶೈಕ್ಷಣಿಕ ವರ್ಷದ ಸಂಪೂರ್ಣ ಶಾಲಾ ಶುಲ್ಕವನ್ನು ಭರಿಸಲಾಗಿದೆ.
ವಿದ್ಯಾರ್ಥಿಯ ತಾಯಿ ಲಕ್ಷ್ಮೀ ಪ್ರಭು ಇವರ ಸಮ್ಮುಖದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಚಂದ್ರಶೇಖರ್ ಅವರಿಗೆ ಟ್ರಸ್ಟಿಯಾದ ವಿಜಯಕುಮಾರ್ ಇವರು 8 ಸಾವಿರ ಮೊತ್ತದ ಚೆಕ್ಕನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಟ್ರಸ್ಟಿಗಳಾದ ಅರುಣ್ ಕುಮಾರ್ ಪ್ರಭು, ಹರೀಶ್ ಪ್ರಭು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!